ಹುಬ್ಬಳ್ಳಿ: ನಿರಾಶ್ರಿತರಿಗೆ ಹಾಗೂ ನಿರ್ಗತಿಕರಿಗೆ ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯಕರ್ತರು ಆಹಾರದ ಕಿಟ್ ವಿತರಣೆ ಮಾಡುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ.
ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆನಂದನಗರದ ಭಾಗದಲ್ಲಿ 1500ಕ್ಕೂ ಹೆಚ್ಚು ಆಹಾರದ ಕಿಟ್ ವಿತರಣೆ ಮಾಡಲಾಗಿದೆ. ಆಹಾರ ಕಿಟ್ನಲ್ಲಿ ಅಕ್ಕಿ,ಗೋಧಿ, ಸಕ್ಕರೆ, ರವಾ,ಬೇಳೆ ಹಾಗೂ ಚಹಾ ಪುಡಿ ಸೇರಿ ಹಲವಾರು ಆಹಾರ ಧಾನ್ಯ ವಿತರಣೆ ಮಾಡಲಾಗಿದೆ.
ಸಾರ್ವಜನಿಕರು ಆಹಾರಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದರೂ ಆಹಾರ ಧಾನ್ಯ ವಿತರಣೆ ವೇಳೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡಿರೋದು ವಿಶೇಷ.