ETV Bharat / state

ಹುಬ್ಬಳ್ಳಿಯಲ್ಲಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಸರ್ವಧರ್ಮ ಸಭೆ..

ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್​ಡೌನ್ ಆದೇಶ ಘೋಷಣೆಯಾಗಿದೆ. ಈ ಸಂದರ್ಭದಲ್ಲಿ ಮಂಟೂರ ರಸ್ತೆಯಲ್ಲಿರುವ ಅರಳಿಕಟ್ಟಿ ಕಾಲೋನಿಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ಖಂಡನೀಯ. ಇದರ ಬಗ್ಗೆ ಅಂಜುಮನ್ ಇಸ್ಲಾಂ ಸಂಸ್ಥೆಯು ಸೂಕ್ತ ಕ್ರಮ ಗೊಳ್ಳಲಿದೆ. ಇದರಲ್ಲಿ ಯಾರೂ ಕೂಡ ಕೋಮುವಾದ ಸೃಷ್ಟಿಸಬಾರದು ಎಂದು ಹೊರಟ್ಟಿ ಮನವಿ ಮಾಡಿದರು.

Basavaraj Horatti
ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಸರ್ವಧರ್ಮ ಸಭೆ
author img

By

Published : Apr 6, 2020, 5:37 PM IST

Updated : Apr 6, 2020, 7:27 PM IST

ಹುಬ್ಬಳ್ಳಿ : ವಾಣಿಜ್ಯನಗರಿಯಲ್ಲಿ ಮೊನ್ನೆ ನಡೆದ ಕಲ್ಲು ತೂರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಸರ್ಕ್ಯೂಟ್ ಹೌಸ್​ನಲ್ಲಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ಸರ್ವಧರ್ಮ ಸಭೆ ಹಮ್ಮಿಕೊಳ್ಳಲಾಗಿತ್ತು.

ಕೊರೊನಾ ವೈರಸ್ ಭೀತಿ ಹಿನ್ನೆಲೆ ದೇಶಾದ್ಯಂತ ಲಾಕ್​ಡೌನ್ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದೆ. ರಾಜ್ಯದಲ್ಲಿ ಹಲವು ಸಮಾಜದ ನಡುವೆ ವೈಮನಸ್ಸು ಉಂಟಾಗುವ ಪ್ರಕರಣ ಹೆಚ್ಚಾಗುತ್ತಿದೆ. ಅಲ್ಲದೇ ಮೊನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ಸಾಮೂಹಿಕ ಪ್ರಾರ್ಥನೆಗಾಗಿ ತೆರಳಿದ್ದವರಿಂದ ಪೊಲೀಸರ ಮೇಲೆ ಹಲ್ಲೆ ಪ್ರಕರಣ ದಾಖಲಾಗಿದೆ. ಸಮಾಜದಲ್ಲಿ ಕೋಮುವಾದ ಸೃಷ್ಟಿಸುವ ಲಕ್ಷಣಗಳು ಗೋಚರಿಸುತ್ತಿವೆ. ಇಂತಹ ಬೆಳವಣಿಗೆಗಳಿಗೆ ಕಡಿವಾಣ ಹಾಕಿ ಸೌಹಾರ್ದತೆಯಿಂದ ಸರ್ವಧರ್ಮ ಸಮನ್ವಯ ರೀತಿ ಜೀವನ ನಡೆಸಬೇಕು ಎಂದು ಸಭೆಯಲ್ಲಿ ತೀರ್ಮಾನ ಕೈಗೊಂಡರು.

ಹುಬ್ಬಳ್ಳಿಯಲ್ಲಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಸರ್ವಧರ್ಮ ಸಭೆ

ಇದೇ ವೇಳೆ ಮಾತನಾಡಿದ ಬಸವರಾಜ ಹೊರಟ್ಟಿ ಹಾಗೂ ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಯೂಸುಫ್ ಸವಣೂರ, ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್​ಡೌನ್ ಆದೇಶ ಘೋಷಣೆಯಾಗಿದೆ. ಈ ಸಂದರ್ಭದಲ್ಲಿ ಮಂಟೂರ ರಸ್ತೆಯಲ್ಲಿರುವ ಅರಳಿಕಟ್ಟಿ ಕಾಲೋನಿಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ಖಂಡನೀಯ. ಇದರ ಬಗ್ಗೆ ಅಂಜುಮನ್ ಇಸ್ಲಾಂ ಸಂಸ್ಥೆಯು ಸೂಕ್ತ ಕ್ರಮ ಗೊಳ್ಳಲಿದೆ. ಇದರಲ್ಲಿ ಯಾರೂ ಕೂಡ ಕೋಮುವಾದ ಸೃಷ್ಟಿಸಬಾರದು.

ಹು-ಧಾ ಮಹಾನಗರದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಸಹೋದರರಂತೆ ಜೀವನ ನಡೆಸುತ್ತಿದ್ದಾರೆ. ಕೆಲ ವಿಕೃತ ಮನಸ್ಥಿತಿಯವರು ಇಂತಹ ಕೃತ್ಯ ಎಸಗಿದ್ದಾರೆ. ಆದರೆ, ಯಾವುದೇ ಪ್ರಕರಣಕ್ಕೆ ಇಸ್ಲಾಂ ಧರ್ಮ ಪ್ರೇರಣೆ ನೀಡಿಲ್ಲ ಎಂದು ಅವರು ಹೇಳಿದರು. ಈಗಾಗಲೇ ಹುಬ್ಬಳ್ಳಿ-ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆಯೊಂದಿಗೆ ಚರ್ಚೆ ನಡೆಸಲಾಗಿದೆ. ಸಮಾಜದಲ್ಲಿ ಒಳ್ಳೆಯ ರೀತಿಯ ವಾತಾವರಣ ನಿರ್ಮಾಣವಾಗಬೇಕು. ನಾವೂ ಸರ್ಕಾರದ ಆದೇಶ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ.

ಈಗಾಗಲೇ 130 ಮಸೀದಿಗಳನ್ನು ಸಹ ಬಂದ್ ಮಾಡಿದ್ದೇವೆ. ಯಾವ ಮಸೀದಿಯಲ್ಲೂ ಸಾಮೂಹಿಕವಾಗಿ ಪ್ರಾರ್ಥನೆ ಮಾಡುತ್ತಿಲ್ಲ. ಯಾರು ಸಹ ಮನೆ ಬಿಟ್ಟು ಹೊರಬರಬಾರದು ಎಂದು ಮನವಿ ಮಾಡಿದರು. 8 ರಂದು ಇರುವ ಶಭೇ ಭರಾತ್ ಹಬ್ಬದಂದು ಸಹ ಯಾರೂ ಸಹ ಮನೆಯಿಂದ ಹೊರಗೆ ಬರಬಾರದು. ಯಾರೂ ಖಬರಸ್ಥಾನಕ್ಕೂ ಸಹ ಹೋಗಬಾರದು. ಅಂಜುಮನ್ ಇಸ್ಲಾಂ ಸಂಸ್ಥೆಯಿಂದಲೇ ಖಬರಸ್ಥಾನ ಸ್ವಚ್ಛತಾ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು. ಸರ್ಕಾರದ ಲಾಕ್​ಡೌನ್ ಆದೇಶವನ್ನ ನಾವೂ ಕಟ್ಟುನಿಟ್ಟಾಗಿ ಪಾಲಿಸುತ್ತೇವೆ. ಆದರೆ, ಯಾರೋ ಒಬ್ಬರು ಮುಸ್ಲಿಂರು ಮಾಡಿರೋ ತಪ್ಪಿಗೆ ಇಡೀ ಸಮುದಾಯಕ್ಕೆ ಕಪ್ಪು ಚುಕ್ಕೆ ತರಬಾರದು ಎಂದರು.

Last Updated : Apr 6, 2020, 7:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.