ಹುಬ್ಬಳ್ಳಿ: ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕ ಹೆಚ್ಚಳ ವಿರೋಧಿಸಿ ಇಂದು ರಾಜ್ಯಾದ್ಯಂತ ಎಪಿಎಂಸಿ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಏಷ್ಯಾದ ಎರಡನೇ ಅತಿದೊಡ್ಡ ಎಪಿಎಂಸಿ ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿ ಎಪಿಎಂಸಿ ಸಂಪೂರ್ಣ ಸ್ಥಗಿತಗೊಂಡಿದೆ.
ರಾಜ್ಯಾದ್ಯಂತ ಸಾಂಕೇತಿಕವಾಗಿ ಎಪಿಎಂಸಿ ಬಂದ್ಗೆ ಕರೆ ನೀಡಿದ್ದು, ಶೇ 0.35 ಇದ್ದ ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕವನ್ನು ಸರ್ಕಾರ ಏಕಾಏಕಿ ಶೇ 1ಕ್ಕೆ ಹೆಚ್ಚಳ ಮಾಡಿದ ಕಾರಣ ವರ್ತಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜ್ಯಾದ್ಯಂತ ಎಪಿಎಂಸಿ ಬಂದ್ಗೆ ಕರೆ ನೀಡಿದ್ದು, ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಇದನ್ನೂ ಓದಿ:ರಾಜ್ಯದ ಟಾಪ್ ವಿವಿ ಪಟ್ಟಿಯಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಅಗ್ರ ಸ್ಥಾನ
ಡಿ. 23ರಂದು ಬೆಂಗಳೂರಿನಲ್ಲಿ ಎಫ್‌ಕೆಸಿಸಿಐ ಹಾಗೂ ಕೆಸಿಸಿಐ ನೇತೃತ್ವದಲ್ಲಿ ರಾಜ್ಯದ ಎಪಿಎಂಸಿ ವರ್ತಕರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಯಲಿದ್ದು, ಶುಲ್ಕ ಹೆಚ್ಚಳ ಹಿಂಪಡೆಯಲು ವಿನಂತಿಸಿ ಸಚಿವರಿಗೆ ಮನವಿ ಸಲ್ಲಿಸಲಾಗುತ್ತದೆ. ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಎಪಿಎಂಸಿ ಬಂದ್ ಮಾಡಲು ನಿರ್ಣಯ ಕೈಗೊಂಡಿರುವುದಾಗಿ ವರ್ತಕರು ತಿಳಿಸಿದ್ದಾರೆ.