ಹುಬ್ಬಳ್ಳಿ: ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳರಿಬ್ಬರು ಇಲ್ಲಿನ ಕಲ್ಯಾಣ್ ಜ್ಯುವೆಲ್ಸ್ ಮಳಿಗೆಯಲ್ಲಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ.
ನಗರದ ಸ್ಟೇಷನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲ್ಸ್ ಮಳಿಗೆಗೆ ಬಂದ ಇಬ್ಬರು ವ್ಯಕ್ತಿಗಳು ಸೇಲ್ಸ್ಮನ್ ಗಮನ ಬೇರೆಡೆ ಸೆಳೆದು 4 ಲಕ್ಷ ಮೌಲ್ಯದ 59 ಗ್ರಾಂ ಚಿನ್ನ ಎಗರಿಸಿದ್ದಾರೆ.
ಈ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.