ಹುಬ್ಬಳ್ಳಿ: ಬೀಗ ಮುರಿದು ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಂದೀಶ ಉಮೇಶ ಸಕ್ರಪ್ಪನವರ ಬಂಧಿತ ಆರೋಪಿ. ಈತನಿಂದ 8,84,000 ರೂ. ಬೆಲೆಬಾಳುವ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, 06 ಮನೆಗಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ.
ಆರೋಪಿಯನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಪೊಲೀಸ್ ಆಯುಕ್ತರು ಬಹುಮಾನ ಘೋಷಿಸಿದ್ದಾರೆ.