ETV Bharat / state

ಹುಬ್ಬಳ್ಳಿ: ರೈಲಿನಲ್ಲಿ ಚಾಕುವಿನಿಂದ ಇರಿದಿದ್ದ ಆರೋಪಿಗಳ ಬಂಧನ!

ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಚಾಕುವಿನಿಂದ ಇರಿದಿದ್ದ ಆರೋಪಿಗಳನ್ನು ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

Thieves arrested in hubli
ರೈಲಿನಲ್ಲಿ ಚಾಕುವಿನಿಂದ ಇರಿದಿದ್ದ ಆರೋಪಿಗಳ ಬಂಧನ
author img

By

Published : Mar 9, 2022, 10:29 AM IST

ಹುಬ್ಬಳ್ಳಿ: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಚಾಕುವಿನಿಂದ ಇರಿದು ಹಣ, ಮೊಬೈಲ್ ಫೋನ್ ಸುಲಿಗೆ ಮಾಡಿದ್ದ ಆರೋಪಿ ಹಾಗೂ ಅಪ್ತಾಪ್ತ ಬಾಲಕನೊಬ್ಬನನ್ನು ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಹಳೆ ಹುಬ್ಬಳ್ಳಿ ನೂರಾನಿ ಗೌಂಡ್ ನಿವಾಸಿ ಮೊಹಮ್ಮದ್​ ರಫೀಕ್ ಅಲಿಯಾಸ್ ಕಲಾ ಅಬುಲ್ ರಜಾಕ್ ಮುಲ್ಲಾ (25) ಬಂಧಿತ ಆರೋಪಿ. ಫೆ. 23ರಂದು ರಾತ್ರಿ ಬೆಳಗಾವಿ-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಧಾರವಾಡದ ಆರ್.ಜೆ.ಬೆಟಸೂರ ಎಂಬುವವರಿಗೆ ಚಾಕುವಿನಿಂದ ಇರಿದಿದ್ದರು. ಬಳಿಕ ಹಣ, ಮೊಬೈಲ್ ಕಿತ್ತುಕೊಂಡು ಯಲವಿಗಿ ನಿಲ್ದಾಣದಲ್ಲಿ ಇಳಿದು ಪರಾರಿಯಾಗಿದ್ದರು.

ಆರೋಪಿಗಳ ವಿರುದ್ಧ ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ಹಲವು ಕಡೆಗಳಲ್ಲಿ ಪ್ರಕರಣ ದಾಖಲಾಗಿದ್ದವು. ಈ ಹಿನ್ನೆಲೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಇನ್ನೋರ್ವ ಕುಖ್ಯಾತ ಸುಲಿಗೆಕೋರ ತಲೆಮರೆಸಿಕೊಂಡಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ರಾಜಧಾನಿಯಲ್ಲಿ ಗುಂಡಿನ ಸದ್ದು: ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.