ಧಾರವಾಡ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿಯನ್ನು ನಿಲ್ಲಿಸುವಂತೆ ಕರೆ ಬರುತಿದ್ದು, ಕರೆ ಮಾಡಿದವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಡಾ. ಅಂಬೇಡ್ಕರ್ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಕಲಾ ಭವನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಜುಬಲಿ ವೃತ್ತ, ಕೋರ್ಟ್ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿ ಕೆಲವೊತ್ತು ಪ್ರತಿಭಟಿಸಿದರು.
ಅಂಬೇಡ್ಕರ್ ಜೀವನಾಧಾರಿತ ಮಹಾನಾಯಕ ಧಾರಾವಾಹಿ ಪ್ರಸಾರ ಮಾಡುವ ಖಾಸಗಿ ವಾಹಿನಿ ಮುಖ್ಯಸ್ಥರಿಗೆ ಕೆಲವರಿಗೆ ಜೀವ ಬೆದರಿಕೆ ಕರೆ ಬರುತ್ತಿವೆ. ಅವರಿಗೆ ರಕ್ಷಣೆ ನೀಡಬೇಕು. ಜೊತೆಗೆ ಬೆದರಿಕೆ ಹಾಕಿದ ಕಿಡಗೇಡಿಗಳ ಬಂಧಿಸಿ ಅವರ ವಿರುದ್ಧ ದೇಶದ್ರೋಹಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿರೋಧಿ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು