ETV Bharat / state

ತೀವ್ರ ಸ್ವರೂಪ ಪಡೆದ ಕಾನೂನು ವಿದ್ಯಾರ್ಥಿಗಳ ಹೋರಾಟ: ಉಪವಾಸ ಸತ್ಯಾಗ್ರಹ ವೇಳೆ ಮೂವರು ಅಸ್ವಸ್ಥ - Three students illness during protest

ಕಾನೂನು ವಿಶ್ವವಿದ್ಯಾಲಯದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

Three students are sick during fasting protest in hubli
ಉಪವಾಸ ಸತ್ಯಾಗ್ರಹದಲ್ಲಿ ಮೂವರು ಅಸ್ವಸ್ಥ
author img

By

Published : Dec 13, 2021, 3:11 PM IST

Updated : Dec 13, 2021, 3:55 PM IST

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ನವನಗರದ ಕಾನೂನು ವಿಶ್ವವಿದ್ಯಾಲಯದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಉಪವಾಸ ನಿರತ ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ಹುಬ್ಬಳ್ಳಿಯ ನವನಗರದ ಕಾನೂನು ವಿಶ್ವ ವಿದ್ಯಾಲಯದ ಎದುರು ಪ್ರತಿಭಟನೆ ನಡೆಸಲಾಗುತ್ತಿದೆ. ಬೇಡಿಕೆ ಈಡೇರುವವರೆಗೂ ಹೋರಾಟ ನಡೆಸಲು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದು, ಈ ನಿಟ್ಟಿನಲ್ಲಿ ಉಪವಾಸ ಧರಣಿ ಕುಳಿತ ವಿದ್ಯಾರ್ಥಿಗಳಲ್ಲಿ ಮೂವರು ಅಸ್ವಸ್ಥಗೊಂಡಿದ್ದಾರೆ.

ಉಪವಾಸ ಸತ್ಯಾಗ್ರಹ ವೇಳೆ ಮೂವರು ಅಸ್ವಸ್ಥ

ಇದನ್ನೂ ಓದಿ:3ನೇ ದಿನವೂ ಮುಂದುವರಿದ ಕಾನೂನು ವಿದ್ಯಾರ್ಥಿಗಳ ಅಹೋರಾತ್ರಿ ಪ್ರತಿಭಟನೆ, ನಾಳೆಯಿಂದ ಬೆಂಗಳೂರಲ್ಲಿ ಧರಣಿ

ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, ಕಳೆದ‌ ಮೂರು ದಿನದಿಂದ ಉಪವಾಸ ಸತ್ಯಾಗ್ರಹ ಹೋರಾಟ ಮಾಡುತ್ತಿದ್ದಾರೆ. ಪ್ರಸ್ತುತ ಉಪವಾಸ ನಿರತ ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಮೂವರು ವಿದ್ಯಾರ್ಥಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Last Updated : Dec 13, 2021, 3:55 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.