ETV Bharat / state

ಯೋಗೀಶ್​ ಗೌಡ ಹತ್ಯೆ ಪ್ರಕರಣ ಸಿಬಿಐ ತನಿಖೆ: ಟಿಂಗರೀಕರ ನಿರೀಕ್ಷಣಾ ಜಾಮೀನು ಅರ್ಜಿ ವಜಾ - Yogish Gowda murder case

ಇನ್ಸ್​ಪೆಕ್ಟರ್​ ಚನ್ನಕೇಶವ ಟಿಂಗರೀಕರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಿಬಿಐ ನ್ಯಾಯಾಲಯ ತಿರಸ್ಕರಿಸಿದೆ.

Yogesh gowda
ಯೋಗೀಶ್​ ಗೌಡ
author img

By

Published : Oct 29, 2020, 8:48 PM IST

Updated : Oct 30, 2020, 6:39 AM IST

ಧಾರವಾಡ: ಯೋಗೀಶ್​ ಗೌಡ ಕೊಲೆ ಕೇಸ್ ಸಿಬಿಐ ತನಿಖೆ ಹಿನ್ನೆಲೆ ಪೊಲೀಸ್ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇನ್ಸ್​ಪೆಕ್ಟರ್ ಚನ್ನಕೇಶವ ಟಿಂಗರೀಕರ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಸಿಬಿಐ ನ್ಯಾಯಾಲಯಕ್ಕೆ 4ನೇ ಹೆಚ್ಚುವರಿ ನ್ಯಾಯಾಲಯ ವರ್ಗಾಯಿಸಿತ್ತು. ಇಂದು ಸಿಬಿಐ ಕೋರ್ಟ್‌ನಲ್ಲಿ ಟಿಂಗರೀಕರ ಅರ್ಜಿ ತಿರಸ್ಕೃತಗೊಂಡಿದೆ.

ಹೆಬ್ಬಳ್ಳಿ ಕ್ಷೇತ್ರದ ಜಿಪಂ ಸದಸ್ಯ ಯೋಗೀಶ್​ ಗೌಡ ಹತ್ಯೆ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಈಗಾಗಲೇ ಅನೇಕ ಪೊಲೀಸ್ ಅಧಿಕಾರಿಗಳನ್ನು ಸಹ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಈ ಹಿನ್ನೆಲೆ‌‌ ಟಿಂಗರೀಕರ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.‌ ಇನ್ಸ್​ಪೆಕ್ಟರ್ ಚನ್ನಕೇಶವ ಟಿಂಗರೀಕರ ಯೋಗೀಶಗೌಡ ಹತ್ಯೆಯ ಪೊಲೀಸ್ ತನಿಖಾಧಿಕಾರಿಯಾಗಿದ್ದರು.

Last Updated : Oct 30, 2020, 6:39 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.