ಧಾರವಾಡ : ಜಿಲ್ಲೆಯಲ್ಲಿ ಇಂದು ಎರಡು ಕೋವಿಡ್-19 ಪ್ರಕರಣ ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ರೋಗಿ- 5828 (68 ವರ್ಷ, ಪುರುಷ) ಇವರು ಕಲಘಟಗಿ ತಾಲೂಕು ದೇವಿಕೊಪ್ಪ ನಿವಾಸಿಯಾಗಿದ್ದು, ತೀವ್ರ ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದರು. ತಪಾಸಣೆಗೊಳಪಡಿಸಿದಾಗ ಸೋಂಕಿರುವುದು ದೃಢಪಟ್ಟಿದೆ. ಅವರ ಸಂಪರ್ಕವನ್ನು ಪತ್ತೆ ಹಚ್ಚಲಾಗುತ್ತಿದೆ.
ರೋಗಿ- 5829 (56 ವರ್ಷ ಮಹಿಳೆ) ಇವರು ಮಹಾರಾಷ್ಟ್ರದಿಂದ ಆಗಮಿಸಿದ ಹಿನ್ನೆಲೆ ಹೊಂದಿದ್ದಾರೆ. ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದರು. ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 66ಕ್ಕೆ ಏರಿಕೆಯಾಗಿದೆ. ಈಗಾಗಲೇ 39 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.