ಹುಬ್ಬಳ್ಳಿ: ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯನ್ನು ಪುನಃ ಪ್ರಾರಂಭ ಮಾಡುವಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಶಿಕ್ಷಕರು ಜಗದೀಶ ಶೆಟ್ಟರ್ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.
ನಗರದ ಜಗದೀಶ ಶೆಟ್ಟರ್ ನಿವಾಸಕ್ಕೆ ಮುತ್ತಿಗೆ ಹಾಕಿದ ಶಿಕ್ಷಕರು, ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವರ್ಗಾವಣೆ ಪ್ರಕ್ರಿಯೆಯನ್ನು ಪುನಃ ಪ್ರಾರಂಭಿಸುವಂತೆ ಒತ್ತಾಯಿಸಿದರು.
ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ರಾಜ್ಯಾಧ್ಯಕ್ಷ ಅಶೋಕ ಸಜ್ಜನರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘದ ಸದಸ್ಯರು, ಶಿಕ್ಷಕ ಎಲ್.ಐ. ಲಕ್ಕಮ್ಮನವರ ಸೇರಿದಂತೆ ಐವತ್ತಕ್ಕೂ ಹೆಚ್ಚು ಶಿಕ್ಷಕರು ಭಾಗಿಯಾಗಿದ್ದರು.