ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದರಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಬೆಡ್ ಗಳ ಕೊರತೆ ಇದ್ದು, ಖಾಸಗಿ ಆಸ್ಪತ್ರೆಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ಜಿಲ್ಲಾಡಳಿತ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದೆ.
ಹುಬ್ಬಳ್ಳಿ ಘಂಟಿಕೇರಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಎನ್.ಆರ್ ಪುರುಷೋತ್ತಮ, ಶಹರ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಡಾ.ಸಂಪತ್ ಮತ್ತಿತರರು ಉಪಸ್ಥಿತರಿದ್ದರು.