ಧಾರವಾಡ: ದೇಶದ್ರೋಹಿ ಕ್ರಿಮಿಗಳು ಸಮಾಜ ಮತ್ತು ದೇಶವನ್ನು ಕುಲಗೇಡಿಸುವ ಪ್ರಕ್ರಿಯೆ ಮಾಡುತ್ತಿವೆ. ಸ್ವಾತಂತ್ರ್ಯ ಹೋರಾಟದ ಸ್ಮಾರಕ ಫ್ರೀಡಂ ಪಾರ್ಕ್‌ನಲ್ಲಿ ದೇಶದ್ರೋಹಿ ಘೋಷಣೆ ಹಾಕುತ್ತಿರುವುದು ದುರಾದೃಷ್ಟಕರ ಸಂಗತಿ. ಈ ಬಗ್ಗೆ ಸರ್ಕಾರ, ಸಮಾಜ ಎಲ್ಲರೂ ಗಂಭೀರವಾಗಿ ಯೋಚನೆ ಮಾಡಬೇಕಿದೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಸಿಎಎ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಓರ್ವ ಯುವತಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ, ಇನ್ನೋರ್ವಳು ಫ್ರೀ ಕಾಶ್ಮೀರ್ ಎಂದು ಭಿತ್ತಿಪತ್ರ ಪ್ರದರ್ಶಿಸಿರೋದು ಖಂಡನೀಯ. ಇಂತವರನ್ನು ಎನ್‌ಕೌಂಟರ್ ಮಾಡಬೇಕು. ಆಗ ಮಾತ್ರ ಇಂತಹ ಕೃತ್ಯಗಳಿಗೆ ಕಡಿವಾಣ ಬೀಳುತ್ತೆ ಎಂದು ಅಭಿಪ್ರಾಯಪಟ್ಟರು.
ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಯಾರೇ ಇರಲಿ ದೇಶದ್ರೋಹ ದೇಶದ್ರೋಹವೇ. ಕಮ್ಯೂನಿಸ್ಟರು, ಮಾರ್ಕ್ಸವಾದಿಗಳು ವ್ಯವಸ್ಥಿತ ಸಂಚು ಮಾಡುತ್ತಿದ್ದಾರೆ ಎಂದು ಮುತಾಲಿಕ್ ಆರೋಪಿಸಿದರು. ಪಿಎಫ್ಐ, ಎಸ್.ಡಿ.ಪಿ.ಐ, ಐಸಿಸ್ ಸಂಘಟನೆಗಳಿಂದ ವ್ಯವಸ್ಥಿತ ಸಂಚು ನಡೆಯುತ್ತಿದೆ. ಇದೆಲ್ಲದರ ಕೇಂದ್ರ ಜೆ.ಎನ್.ಯು ಎಂದು ಮುತಾಲಿಕ್ ಆರೋಪಿಸಿದ್ದಾರೆ.