ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಆಯೋಜಿಸಿರುವ ರಾಷ್ಟ್ರಪತಿ ಅವರಿಗೆ ಪೌರಸನ್ಮಾನ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ಬುಡಕಟ್ಟು ಜನಾಂಗದವರು ಆಗಮಿಸಿದ್ದಾರೆ.
ನಗರದ ಜಿಮಖಾನ್ ಮೈದಾನಕ್ಕೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯಕ್ರಮಕ್ಕೆ ಕಲಘಟಗಿ ತಾಲೂಕು ಹಾಗೂ ಅಳ್ನಾವರ ತಾಲ್ಲೂಕಿನ ಬುಡಕಟ್ಟು ಜನರು ಆಗಮಿಸಿದ್ದಾರೆ. ಕಾರ್ಯಕ್ರಮಕ್ಕೆ ಬುಡಕಟ್ಟು ಸಮುದಾಯದವರಿಗೆ ವಿಶೇಷ ಸ್ಥಳಾವಕಾಶ ಕಲ್ಪಿಸಲಾಗಿದೆ. ತಮ್ಮದೇ ಬುಡಕಟ್ಟು ಜನಾಂಗದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ.
ರಾಷ್ಟ್ರಪತಿ ಆಗಮನ ಹಿನ್ನೆಲೆ ಹೈ ಅಲರ್ಟ್.. ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್: ವಾಣಿಜ್ಯನಗರಿ ಹುಬ್ಬಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿರುವ ಹಿನ್ನೆಲೆ ನಗರದಾದ್ಯಂತ ಖಾಕಿ ಹೈ ಅಲರ್ಟ್ ಘೋಷಿಸಿದ್ದು, ಹುಬ್ಬಳ್ಳಿಯ ವಿಮಾನ ನಿಲ್ದಾಣದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ವಿಮಾನ ನಿಲ್ದಾಣದ ಒಳಗೆ ಹೋಗುವ ಪ್ರಯಾಣಿಕರು ಹಾಗೂ ವಾಹನಗಳ ತಪಾಸಣೆ ಮಾಡುವ ಮೂಲಕ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಮಧ್ಯಾಹ್ನ 12.25ಕ್ಕೆ ಹುಬ್ಬಳ್ಳಿಗೆ ಬಂದು ಇಳಿಯಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ವಿಶೇಷ ಟ್ರಾಫಿಕ್ ಕಾರ್ಯಾಚರಣೆ ಮೂಲಕ ಜಿಮ್ ಖಾನ್ ಮೈದಾನಕ್ಕೆ ಕರೆ ತರಲು ಬಿಗಿಯಾದ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ: ವಿಶ್ವವಿಖ್ಯಾತ 'ಮೈಸೂರು ದಸರಾ' ಮಹೋತ್ಸವ.. ರಾಷ್ಟ್ರಪತಿಯಿಂದ ವಿದ್ಯುಕ್ತ ಚಾಲನೆ