ಹುಬ್ಬಳ್ಳಿ: ತ್ರಿವಳಿ ತಲಾಖ್ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಆದೇಶ ಸ್ವಾಗತಾರ್ಹವಾಗಿದ್ದು, ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಕೇಂದ್ರ ಸರ್ಕಾರ ಒಂದು ಉತ್ತಮ ಕೊಡುಗೆ ನೀಡಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಘಟಕದ ರಾಜ್ಯ ಉಪಾಧ್ಯಕ್ಷ ಇಮ್ತಿಯಾಜ್ ಮುಲ್ಲಾ ಹೇಳಿದ್ದಾರೆ.
ದೇಶಪಾಂಡೆ ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ತ್ರಿವಳಿ ತಲಾಖ್ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಆದೇಶ ಸ್ವಾಗತಾರ್ಹವಾಗಿದೆ. ಸುಮಾರು ವರ್ಷಗಳಿಂದ ಸಂಕಷ್ಟಕ್ಕೆ ಸಿಲುಕಿದ್ದ ಮುಸ್ಲಿಂ ಮಹಿಳೆಯರಿಗೆ ಕೇಂದ್ರ ಸರ್ಕಾರದ ಆದೇಶ ಪೂರಕವಾಗಿದೆ. ಮುಸ್ಲಿಂ ಭಾಂದವ ಮಹಿಳೆಯರಿಗೆ ಕೇಂದ್ರ ಸರ್ಕಾರ ಒಂದು ಉತ್ತಮ ಕೊಡುಗೆ ನೀಡಿದ್ದು, ನರೇಂದ್ರ ಮೋದಿಯವರು ಉತ್ತಮ ಆದೇಶ ನೀಡುವ ಮೂಲಕ ಸಮಾಜಕ್ಕೆ ಒಳಿತು ಮಾಡಿದ್ದಾರೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಅಪ್ರತಿಮ ನಾಯಕ ನರೇಂದ್ರ ಮೋದಿ ತ್ರಿವಳಿ ತಲಾಖ್ ರದ್ದುಗೊಳಿಸಿ ದೇಶದ ಮುಸ್ಲಿಂ ಮಹಿಳೆಯರ ಜೀವನಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. ತ್ರಿವಳಿ ತಲಾಖ್ ಎಂಬುವುದು ಮುಸ್ಲಿಂ ಮಹಿಳೆಯರ ಜೀವನಕ್ಕೆ ಮಾರಕವಾಗಿತ್ತು. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಯಾವ ಪ್ರಜೆ ಕೂಡ ಸಮಸ್ಯೆಗಳಿಗೆ ಬಲಿಯಾಗಬಾರದೆಂಬ ಮೋದಿಯವರ ನಿರ್ಣಯ ಮುಸ್ಲಿಂ ಸಮುದಾಯಕ್ಕೆ ಒಳಿತು ಮಾಡಿದೆ. ತಲಾಕ್ ರದ್ದುಗೊಳಿಸಿ ಮಸೂದೆ ಮಂಡಿಸಿರುವುದು ಸಂತಸ ತಂದಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.