ಹುಬ್ಬಳ್ಳಿ: ಗ್ರಾಪಂ ಸದಸ್ಯ ದೀಪಕ್ ಪಟದಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ 4 ರಂದು ಗ್ರಾಪಂ ಸದಸ್ಯ ದೀಪಕ್ ಪಟದಾರಿ ಅವರನ್ನು ಹುಬ್ಬಳ್ಳಿ ತಾಲೂಕಿನ ರಾಯನಾಳ ಬಳಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.
ಇನ್ನು ದೀಪಕ್ ಹತ್ಯೆಗೆ ಸರಿಯಾದ ನ್ಯಾಯ ಸಿಕ್ಕಿಲ್ಲ ಹಾಗಾಗಿ ಈ ಪ್ರಕರಣವನ್ನ ಸಿಐಡಿಗೆ ವರ್ಗಾವಣೆ ಮಾಡುವಂತೆ ಸಂಬಂಧಿಕರು ಆಗ್ರಹಿಸಿದರು. ಅದೇ ರೀತಿ ದೀಪಕ್ ಕೊಲೆ ಪ್ರಕರಣವನ್ನ ಸಿಐಡಿಗೆ ವರ್ಗಾವಣೆಯನ್ನು ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಾಗಲಕೋಟೆ ಜಿಲ್ಲೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿರುವಾಗಲೇ ದೀಪಕ್ ಪತ್ನಿ ಪುಷ್ಪಾ ಕಳೆದ ತಿಂಗಳು 28ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಹಲವು ಅನುಮಾನಕ್ಕೂ ಕಾರಣವಾಗಿತ್ತು. ಬಳಿಕ ಡೆತ್ನೋಟ್ವೊಂದರಲ್ಲಿ ತಮ್ಮ ಸಾವಿಗೆ ತವರು ಮನೆಯವರೇ ಕಾರಣ ಎಂದು ಉಲ್ಲೇಖಿಸಿದ್ದರು. ಹೀಗಾಗಿ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಮತ್ತಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಸಿಐಡಿ ತನಿಖೆ ನಡುವೆಯೇ ಗ್ರಾಪಂ ಸದಸ್ಯ ದೀಪಕ್ ಪಟದಾರಿ ಪತ್ನಿ ಆತ್ಮಹತ್ಯೆ