ಹುಬ್ಬಳ್ಳಿ(ಧಾರವಾಡ): ಹುಬ್ಬಳ್ಳಿಯ ಬ್ಯಾಹಟ್ಟಿ ಗ್ರಾಮದ ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಮಾರುತಿ ಬಸಪ್ಪ ಬಾರಕೇರ(12) ಹಾಗೂ ಕಾರ್ತಿಕ ಗುರುಸಿದ್ದಪ್ಪ ಹಂಚಿನಮನಿ (7) ಮೃತರು. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಓರ್ವನ ಕೊಲೆ, ಹತ್ತಾರು ವಾಹನಗಳಿಗೆ ಬೆಂಕಿ