ಹುಬ್ಬಳ್ಳಿ: ಕೊರೊನಾ ವೈರಸ್ನಿಂದ ಬಳಲುತ್ತಿದ್ದ ಇಬ್ಬರು ಮಕ್ಕಳು ಸಂಪೂರ್ಣ ಗುಣಮುಖರಾಗಿದ್ದು, ನಿನ್ನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಕೊರೊನಾ ಪಾಸಿಟಿವ್ ದೃಢಪಟ್ಟಿದ್ದ ಪಿ- 234( 3.6 ವರ್ಷ, ಗಂಡು ಮಗು) ಹಾಗೂ ಪಿ-235 (7 ವರ್ಷ, ಬಾಲಕಿ) ಇವರು ಸಂಪೂರ್ಣ ಗುಣಮುಖರಾಗಿದ್ದು, 24 ಗಂಟೆಗಳ ಅಂತರದಲ್ಲಿ 2 ಬಾರಿ ಅವರು ಗಂಟಲು ದ್ರವ ಪರೀಕ್ಷೆ ಮಾಡಿದಾಗ ವರದಿ ನೆಗೆಟಿವ್ ಬಂದಿದೆ. ಅಲ್ಲದೇ ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನೂ ಕೂಡ ವೈದ್ಯರು ದೃಢಪಡಿಸಿದ್ದರಿಂದ ಈ ಇಬ್ಬರೂ ಮಕ್ಕಳನ್ನು ಬಿಡುಗಡೆ ಮಾಡಲಾಗಿದೆ. ಈ ಮಕ್ಕಳ ಆರೈಕೆಗಾಗಿ ಆಸ್ಪತ್ರೆಯಲ್ಲಿದ್ದ ಇವರ ತಾಯಿಗೆ ಕೊರೊನಾ ತಗುಲಿರಲಿಲ್ಲ. ಆದರೂ ಪರೀಕ್ಷಿಸಿ ನೆಗೆಟಿವ್ ವರದಿ ಬಂದ ನಂತರ ಮಕ್ಕಳೊಂದಿಗೆ ಕಳುಹಿಸಿಕೊಡಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ನಾಲ್ವರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 6 ಜನ ಕಿಮ್ಸ್ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿಯಲ್ಲಿ ಕೊರೊನಾ ಸೋಂಕಿತ ಇಬ್ಬರು ಮಕ್ಕಳು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ - ಇಬ್ಬರು ಕೊರೊನಾ ಸೋಂಕಿತರು ಗುಣಮುಖ
ಕೊರೊನಾ ಪಾಸಿಟಿವ್ ದೃಢಪಟ್ಟಿದ್ದ ಪಿ-234 ಹಾಗೂ ಪಿ-235 ಸಂಪೂರ್ಣ ಗುಣಮುಖರಾಗಿದ್ದು, ನಿನ್ನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.