ಧಾರವಾಡ: ಜಿಲ್ಲೆಯಲ್ಲಿ ಇಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
P-1609 (22, ಪುರುಷ) ಹಾಗೂ P-1610 (23, ಪುರುಷ) ಇವರಿಬ್ಬರು ದೆಹಲಿಯಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಇವರನ್ನು ಜಿಲ್ಲೆಗೆ ಬಂದ ಕೂಡಲೇ ಗಂಟಲು ದ್ರವ ಪರೀಕ್ಷೆಗೊಳಪಡಿಸಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು ಎಂದು ತಿಳಿಸಿದರು.
ಇನ್ನು, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಈಗಾಗಲೇ 09 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.