ಧಾರವಾಡ: ಜಿಲ್ಲೆಯಲ್ಲಿ ಇಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಪಿ-2807 (26 ವರ್ಷ, ಮಹಿಳೆ) ಗೆ ಪಿ-1123 ಅವರ ಸಂಪರ್ಕದಿಂದ ಸೋಂಕು ತಗುಲಿದೆ. ಪಿ-2808 ( 27 ವರ್ಷದ ಮಹಿಳೆ) ಇವರು ಮಹಾರಾಷ್ಟ್ರ ರಾಜ್ಯ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಈ ಇಬ್ಬರೂ ವ್ಯಕ್ತಿಗಳು ಈಗಾಗಲೇ ಕ್ವಾರಂಟೈನ್ನಲ್ಲಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಅಲ್ಲದೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ಈಗಾಗಲೇ 11 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.