ETV Bharat / state

ಧಾರವಾಡದಲ್ಲಿ ಮತ್ತೆರಡು ಪಾಸಿಟಿವ್‌ ಕೇಸ್‌.. 48ಕ್ಕೇರಿದ ಸೋಂಕಿತರ ಸಂಖ್ಯೆ - ಧಾರವಾಡ ಕೊರೊನಾ ಸುದ್ದಿ

ಇಂದು ಹೊಸ 2 ಪಾಸಿಟಿವ್‌ ಕೇಸ್ ಪತ್ತೆಯಾಗಿವೆ. ಇಬ್ಬರೂ ಸೋಂಕಿತರನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

DC Deepa cholan
DC Deepa cholan
author img

By

Published : Jun 1, 2020, 9:00 PM IST

ಧಾರವಾಡ : ಜಿಲ್ಲೆಯಲ್ಲಿ ಇಂದು ಸಂಜೆ ಎರಡು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಪಿ-3397 (47) ವರ್ಷದ ಪುರುಷ ಇವರು ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದವರು. ಕೆಮ್ಮು, ನೆಗಡಿ ಹಾಗೂ ತೀವ್ರ ಜ್ವರದಿಂದಾಗಿ ಎಸ್​ಡಿಎಂ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ವೇಳೆ ಇವರಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟ ನಂತರ ಅವರನ್ನು ಕಿಮ್ಸ್​ಗೆ ದಾಖಲಿಸಲಾಗಿದೆ.

ಪಿ-3398 (25) ವರ್ಷದ ಪುರುಷ ಇವರು ಹುಬ್ಬಳ್ಳಿ ಶಹರ ನಿವಾಸಿ. ಬೆಂಗಳೂರಿನಿಂದ ಆಗಮಿಸಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಇದೀಗ 48ಕ್ಕೆ ಏರಿಕೆಯಾಗಿದೆ. 11 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದವರು ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.