ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರೊಂದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಹೊರವಲಯದ ಗಬ್ಬೂರ ಬೈಪಾಸ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದೆ.
ಘಟನೆಯಲ್ಲಿ ಚಿಕ್ಕಬಳ್ಳಾಪುರ ಮೂಲದ ರಂಜಿತ್ ಮತ್ತು ರಾಕೇಶ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರದಿಂದ ದಾಂಡೇಲಿಗೆ ಹೋಗುವಾಗ ಘಟನೆ ನಡೆದಿದೆ. ಕಾರಿನಲ್ಲಿದ್ದ ನಿತಿನ್, ಅಮಿತ್, ಪ್ರಮೋದ್, ಲೋಕೇಶ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ಗೆ ದಾಖಲಿಸಲಾಗಿದೆ.
ಅತಿಯಾದ ವೇಗವೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಗದಗ ಕಾನ್ಸ್ಟೇಬಲ್ ಆತ್ಮಹತ್ಯೆ: ಪತ್ರಕರ್ತರು, ಪೊಲೀಸ್ ಸೇರಿ 9 ಮಂದಿ ಮೇಲೆ ಎಫ್ಐಆರ್