ETV Bharat / state

ಹುಬ್ಬಳ್ಳಿಯಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ನೇಣಿಗೆ ಶರಣು - ಹುಬ್ಬಳ್ಳಿಯಲ್ಲಿ ಇಬ್ಬರು ಆತ್ಮಹತ್ಯೆ,

ಹುಬ್ಬಳ್ಳಿಯಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

Two man committed suicide, Two man committed suicide in Hubli, Hubli crime news, ಇಬ್ಬರು ಆತ್ಮಹತ್ಯೆ, ಹುಬ್ಬಳ್ಳಿಯಲ್ಲಿ ಇಬ್ಬರು ಆತ್ಮಹತ್ಯೆ, ಹುಬ್ಬಳ್ಳಿ ಅಪರಾಧ ಸುದ್ದಿ,
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅವಳಿ ಆತ್ಮಹತ್ಯೆ
author img

By

Published : Jun 25, 2021, 12:07 PM IST

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಂದು ಅವಳಿ ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿವೆ. ನಗರದ ಹಳೆ ಬಸ್ ನಿಲ್ದಾಣ ಮತ್ತು ರೈಲ್ವೇ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ದೊರೆತಿವೆ.

ಹಳೆ ಬಸ್ ನಿಲ್ದಾಣದ ಜಾಹೀರಾತು ಫಲಕದ ಹಿಂಭಾಗದಲ್ಲಿ ಟೆಲಿಫೋನ್ ವೈರ್​ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಪೊಲೀಸರ ತನಿಖೆಯ ನಂತರ ತಿಳಿಯಲಿದೆ. ಈ ಘಟನೆ ಕುರಿತು ಉಪನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ನಗರದ ರೈಲ್ವೇ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮತ್ತೋರ್ವರ ಶವ ಪತ್ತೆಯಾಗಿದೆ. ಪೊಲೀಸರು ಆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದಾರೆ. ರೈಲ್ವೆ ಪೊಲೀಸ್​ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.