ಹುಬ್ಬಳ್ಳಿ : ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿಯ ದೇಶಪಾಂಡೆ ನಗರದ ಕೃಷ್ಣ ಕಲ್ಯಾಣಮಂಟಪದ ಬಳಿ ನಿರ್ಮಾಣ ಮಾಡಿರುವ ಕೆಳ ಸೇತುವೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು.
ಕೆಳ ಸೇತುವೆಯನ್ನು ವೀಕ್ಷಿಸಿದ ಸಚಿವರು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ದೇಶಪಾಂಡೆ ನಗರದ ಜನರಿಗೆ ಓಡಾಟಕ್ಕೆ ಅನುಕೂಲವಾಗುವಂತೆ ನಿರ್ಮಾಣ ಮಾಡಿರುವ ಸೇತುವೆ ಬಗ್ಗೆ ಸಚಿವರು ಪ್ರಶಂಸೆ ವ್ಯಕ್ತಪಡಿಸಿದರು.
ಗುತ್ತಿಗೆದಾರ ವಿ.ಎಸ್. ಪ್ರಸಾದ್ ನೇತೃತ್ವದಲ್ಲಿ ಈ ಸೇತುವೆ ನಿರ್ಮಿಸಲಾಗಿದ್ದು, ಜಾಗೃತಿ ಸಂದೇಶಗಳನ್ನು ಬರೆಯಲಾಗಿದೆ.