ಧಾರವಾಡ: ನಗರದಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ಬಿಸಿಲಿಗೆ ಬೆಂದಿದ್ದ ಜಿಲ್ಲೆಯ ಜನತೆಗೆ ವರುಣ ತಂಪೆರೆದಿದ್ದಾನೆ.
ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಕೆಲವೆಡೆ ರಸ್ತೆಗೆ ನೀರು ನುಗ್ಗಿತ್ತು. ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಾಗೂ ಧಾರವಾಡ ತಾಲೂಕಿನ ಕೆಲ ಗ್ರಾಮಗಳಲ್ಲಿ ಕೂಡಾ ಮಳೆಯಾಗಿದ್ದು, ಇದರಿಂದ ಕೆಲ ಹೊತ್ತು ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.