ಹುಬ್ಬಳ್ಳಿ : ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ಬೆಳ್ಳಂ ಬೆಳಗ್ಗೆ ಉಗ್ರರಂತೆ ಮಹಾರಾಷ್ಟ್ರ ಪೋಲಿಸರು ಬಂಧಿಸಿದ್ದು ಖಂಡನೀಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿ ಮಾತನಾಡಿ, ಮಹಾರಾಷ್ಟ್ರದ ಮೈತ್ರಿ ಸರ್ಕಾರ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ತಪ್ಪುಗಳನ್ನು ಸಮಾಜಕ್ಕೆ ಎತ್ತಿ ತೋರಿಸಿದ್ದಕ್ಕೆ ಮತ್ತು ಸಿಎಂ ಉದ್ದವ್ ಠಾಕ್ರೆ ಸರ್ಕಾರದ ತಪ್ಪುಗಳನ್ನು ಮುಚ್ಚಿ ಹಾಕಲು ಬಂಧಿಸಲಾಗಿದೆ. ಈ ಮೂಲಕ ಪತ್ರಿಕಾ ಸ್ವಾತಂತ್ರ್ಯವನ್ನು ದಮನ ಮಾಡಲು ಹೊರಟಿದ್ದಾರೆ. ಇದಕ್ಕೆ ಸಿಎಂ ಉದ್ದವ್ ಠಾಕ್ರೆಯವರು ಮುಂದಿನ ದಿನಗಳಲ್ಲಿ ದೊಡ್ಡ ಬೆಲೆ ತೆರಬೇಕಾಗುತ್ತೆ ಎಂದರು.