ETV Bharat / state

ಕಾಂಗ್ರೆಸ್​ನಲ್ಲಿ ಅಧಿಕಾರಕ್ಕಾಗಿ ಒಳಜಗಳ ಶುರುವಾಗಿದ್ದು, ಡೈವರ್ಟ್ ಮಾಡಲು ಹುಲಿ ಉಗುರು ಪೆಂಡೆಂಟ್ ವಿಚಾರ ತಂದಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ - ಡಿಕೆಶಿ ಪ್ರಾಮುಖ್ಯತೆ ಕಡಿಮೆ ಮಾಡಲು ಸಿದ್ದರಾಮಯ್ಯ ಡ್ರಾಮಾ

ಇನ್ನೂ ಎರಡೂವರೆ ವರ್ಷಕ್ಕೆ ಲೋಕಸಭಾ ಚುನಾವಣೆ ಬಳಿಕ ಡಿಕೆಶಿಗೆ ಅಧಿಕಾರ ಬಿಟ್ಟುಕೊಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ತಮ್ಮ ತಂಡದಿಂದ ಈ ಡ್ರಾಮಾ ಆರಂಭಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

Union Minister Prahlad Joshi spoke to the media.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಧ್ಯಮವದರೊಂದಿಗೆ ಮಾತನಾಡಿದರು.
author img

By ETV Bharat Karnataka Team

Published : Oct 29, 2023, 3:47 PM IST

Updated : Oct 29, 2023, 4:03 PM IST

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಧ್ಯಮವದರೊಂದಿಗೆ ಮಾತನಾಡಿದರು.

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಗೊಂದಲದಿಂದ ರಾಜ್ಯದ ಜನ ಅಂತಂತ್ರವಾಗಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಇನ್ನೂ ಎರಡು ಡಿಸಿಎಂ ಹುದ್ದೆ ಸೃಷ್ಟಿಸಲು ಸಿಎಂ ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ಆರೋಪಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸಿಎಂ ಬಿಟ್ಟು ಸಭೆ ಮಾಡುವ ಸ್ಥಿತಿಗೆ ಸಿದ್ದರಾಮಯ್ಯ ತಲುಪಿದ್ದಾರೆ. ಇದು ರಾಜಕೀಯ ಹೈಡ್ರಾಮ, ಕಾಂಗ್ರೆಸಿನಲ್ಲಿ ನಿತ್ಯ ಭಿನ್ನಮತ ಹೆಚ್ಚಾಗುತ್ತಿದೆ. ಅಧಿಕಾರಕ್ಕಾಗಿ ಒಳಜಗಳ ನಡೆಯುತ್ತಿದೆ. ಇದನ್ನು ಡೈವರ್ಟ್ ಮಾಡಲು ಹುಲಿ ಉಗುರು ಪೆಂಡೆಂಟ್ ವಿಚಾರ ತಂದಿದ್ದಾರೆ ಇದು ದೊಡ್ಡ ಡ್ರಾಮಾ. ಶಾಸಕರನ್ನು ಒಟ್ಟಾಗಿ ಹಿಡಿದಿಟ್ಟುಕೊಳ್ಳುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜಗಳ ತಾರಕಕ್ಕೇರಿದೆ ಎಂದರು.

ಪಕ್ಷದಲ್ಲಿನ ಒಳಜಗಳ ಡೈವರ್ಟ್​ ಮಾಡಲು ಆಪರೇಷನ್ ಕಮಲದ ಬಗ್ಗೆ ಮಾತನಾಡುತ್ತಿದ್ದಾರೆ. ಈ ಸರ್ಕಾರವನ್ನು ತೆಗೆಯಲು ಬಿಜೆಪಿ ಯಾವುದೇ ಚಿಂತನೆ ಮಾಡಿಲ್ಲ. ಜನರು ಕಾಂಗ್ರೆಸ್​ಗೆ ಅಧಿಕಾರ ಕೊಟ್ಟಿದ್ದಾರೆ. ಐದು ವರ್ಷ ನಡೆಸಲಿ. ಆದರೆ ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಾಲಿಶ ಹೇಳಿಕೆ ನೀಡೋದನ್ನು ಬಿಡಬೇಕು ಎಂದು ಜೋಶಿ ತಿರುಗೇಟು ನೀಡಿದ್ದಾರೆ.

ಡಿಕೆಶಿ ಪ್ರಾಮುಖ್ಯತೆ ಕಡಿಮೆಗೊಳಿಸಲು ಯತ್ನ: ಐದಾರು ಸ್ಥಾನಗಳು ಕಡಿಮೆ ಇದ್ರೆ ಸರ್ಕಾರ ರಚನೆ ಬಗ್ಗೆ ಯೋಚನೆ ಮಾಡಬಹುದು.‌ ಆದ್ರೆ 70 ಶಾಸಕರನ್ನು ಕರೆದುಕೊಂಡು ಬಂದು ಸರ್ಕಾರ ರಚನೆ ಮಾಡಲು ಸಾಧ್ಯವಿದೆಯಾ ? ಡಿಕೆಶಿ ಪ್ರಾಮುಖ್ಯತೆ ಕಡಿಮೆ ಮಾಡಲು ಸಿದ್ದರಾಮಯ್ಯ ಡ್ರಾಮಾ ನಡೆಸಿದ್ದಾರೆ. ಮುಂದಿನ ಎರಡೂವರೆ ವರ್ಷದ ನಂತರ ಅಥವಾ ಲೋಕಸಭಾ ಚುನಾವಣೆ ಬಳಿಕ ಡಿಕೆಶಿಗೆ ಅಧಿಕಾರ ಬಿಟ್ಟುಕೊಡಬೇಕಂತ ಸಿದ್ದರಾಮಯ್ಯ ಈ ನಾಟಕ ನಡೆಸಿದ್ದಾರೆ ಎಂದು ಜೋಶಿ ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯ ಸ್ವಾಭಿಮಾನ ಕರ್ನಾಟಕ ಅಂತ ಮಾತನಾಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ರಾಜ್ಯದ ಪರವಾಗಿ ಯಾವುದೇ ಸಹಕಾರ ನೀಡುತ್ತಿಲ್ಲ. ಕೇಂದ್ರ ಜಲ ಸಂಪನ್ಮೂಲಗಳ ವಿಚಾರದಲ್ಲಿ ಅವರು ಸಹಕಾರ ಕೊಟ್ಟಿಲ್ಲ. ಇದನ್ನು ಅವರು ಎದೆ ಮುಟ್ಟಿಕೊಂಡು ಹೇಳಲಿ ಎಂದು ಸವಾಲು ಹಾಕಿದರು.

ಡಿಎಂಕೆ ಪರ ಸಿದ್ದರಾಮಯ್ಯ ಡಿಕೆಶಿ ಪ್ರಚಾರ: ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ರೂಪಿಸಿರುವ ಕಾನೂನುಗಳು ಪಾಲನೆ ಆಗುತ್ತಿದೆ. ಘಮಂಡಿ ಘಟಬಂಧನ ಉಳಿಸಿಕೊಳ್ಳಲು ಡಿಎಂಕೆ ಪರ ಸಿದ್ದರಾಮಯ್ಯ ಮತ್ತು ಡಿಕೆಶಿ ಪ್ರಚಾರ ಮಾಡುತ್ತಾರೆ. ಆದರೆ ಮೇಕೆದಾಟು ಯೋಜನೆ ಬಗ್ಗೆ ಡಿಎಂಕೆ ಜೊತೆಗೆ ಚರ್ಚೆ ಯಾಕೆ ಮಾಡುತ್ತಿಲ್ಲ. ಡಿಎಂಕೆ ನಮ್ಮ ಮಾತು ಕೇಳೊದಿಲ್ಲ. ನಾವೇನು ಮಾಡಿದರು ಅದಕ್ಕೆ ಸಹಜವಾಗಿ ವಿರೋಧಿಸುತ್ತಾರೆ.

ನೀರಿನ ವಿಚಾರವಾದಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದ್ರೆ ಅದು ಕಾಂಗ್ರೆಸ್ ಪಾರ್ಟಿ ಆಗಿದೆ. ನೆಲ, ಜಲ ಸಂರಕ್ಷಣೆ ವಿಚಾರವಾಗಿ ನಾವು ಬದ್ಧರಾಗಿದ್ದೇವೆ. ನಮ್ಮನ್ನು ಜನ ಇಲ್ಲಿ ಸೋಲಿಸಿರಬಹುದು. ಆದರೆ ದೇಶದಲ್ಲಿ ಬಿಜೆಪಿ ಕೈಹಿಡಿದ್ದಾರೆ. ಕೇಂದ್ರದಲ್ಲಿ ನಿಮ್ಮದು ನಾಯಕತ್ವ ಇಲ್ಲದ ಪಾರ್ಟಿ ಎಂದು ವಾಗ್ದಾಳಿ ನಡೆಸಿದರು.

ಪರೀಕ್ಷೆಯಲ್ಲಿ ಅಕ್ರಮ: ನಮ್ಮ ಸರ್ಕಾರದಲ್ಲಿ ಪಿಎಸ್ಐ ಹಗರಣ ಹೊರಬಂತು. ನಾವು ಐಜಿ ಅವರನ್ನು ಜೈಲಿಗೆ ಕಳುಹಿಸಿದ್ದೆವು. ಪರೀಕ್ಷೆಗಳಲ್ಲಿ ಅಕ್ರಮಗಳನ್ನು ತಡೆಗಟ್ಟಲು ಸಾಕಷ್ಟು ತಂತ್ರಜ್ಞಾನ ಬಂದಿದೆ. ಆದರೆ ಯಾಕೆ ಹೀಗೆ ಆಯಿತು. ಅದು ಮಲ್ಲಿಕಾರ್ಜುನ ಖರ್ಗೆ ಅವರ ಜಿಲ್ಲೆಯಲ್ಲಿ ಯಾಕೆ ಈ ಸ್ಕಾಮ್ ಆಗುತ್ತಿದೆ ಗೊತ್ತಾಗುತ್ತಿಲ್ಲ ಎಂದು ಹೇಳಿದರು.

ಇಸ್ರೇಲ್ ಯುದ್ಧ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವರು, ಕಾಂಗ್ರೆಸ್ ಉಗ್ರರ ಪರವಾಗಿ ಇರಬೇಕು ಅಂತ ನಿರ್ಧಾರ ಮಾಡಿದೆಯಾ. ಇಸ್ರೇಲ್ ವಿರುದ್ಧ ಯುದ್ಧ ಮಾಡುತ್ತಿರುವವರು ಉಗ್ರರು, ಅವರಿಗೆ ಯಾವುದೇ ದೇಶ ಇಲ್ಲ. ಭಾರತ ಜಾಗತಿಕ ಮಟ್ಟದಲ್ಲಿ ಉಗ್ರವಾದಿಗಳ ವಿರುದ್ಧ ಮಾತನಾಡುತ್ತಿದೆ.
ಹೀಗಾಗಿ ನಾವು ಉಗ್ರರ ವಿರುದ್ಧದ ಹೋರಾಟಕ್ಕಾಗಿ ಇಸ್ರೇಲ್​ಗೆ ಬೆಂಬಲ ನೀಡಿದ್ದೇವೆ ಎಂದು ತಿಳಿಸಿದರು.

ಇದನ್ನೂಓದಿ: ವಿಧಾನ ಪರಿಷತ್ ಚುನಾವಣೆ: 5 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ

Last Updated : Oct 29, 2023, 4:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.