ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಅಳ್ನಾವರ ರೈಲು ನಿಲ್ದಾಣದಲ್ಲಿ ಅಪರಿಚಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸುಮಾರು 25 ರಿಂದ 30 ವರ್ಷದ ವಯಸ್ಸಿನ ಯುವಕನು ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನು ನೀಲಿ ಬಣ್ಣದ ಶರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದಾನೆ.
ಈ ಕುರಿತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ಯುವಕನ ಶವದ ಗುರುತು ಪತ್ತೆಯಾದವರು ಅಥವಾ ವಾರಸುದಾರರು ಇದ್ದಲ್ಲಿ ದೂರವಾಣಿ ಸಂಖ್ಯೆ 0836-2384751 ಹಾಗೂ ಮೊಬೈಲ್ ಸಂಖ್ಯೆ 9480802126 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.