ಹುಬ್ಬಳ್ಳಿ : ಜಿಲ್ಲೆಯ ನಗರದ ಹೊಸ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಸುಮಾರು 35 ವರ್ಷ ಆಸುಪಾಸಿನ ವ್ಯಕ್ತಿಯಾಗಿದ್ದು, ಈತನ ಎರಡು ಕೈಗಳಲ್ಲಿ ಆರಾರು ಬೆರಳುಗಳಿವೆ. ಅನಾರೋಗ್ಯದ ಕಾರಣದಿಂದ ಮೃತಪಟ್ಟಿರಬೇಕು ಎನ್ನಲಾಗಿದೆ.ಈ ಸಂಬಂಧ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈತನ ಸಂಬಂಧಿಗಳು ಯಾರಾದ್ರು ಇದ್ದರೆ ಗೋಕುಲ್ ರೋಡ್ ಪೊಲೀಸ್ ಠಾಣೆಗೆ ಭೇಟಿ ನೀಡಲು ಪೊಲೀಸರು ಮನವಿ ಮಾಡಿದ್ದಾರೆ.