ಹುಬ್ಬಳ್ಳಿ: ದೇಶಾದ್ಯಂತ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ, ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ಗಾಂಧಿವಾಡದಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಅಂಬೇಡ್ಕರ್ ಮೂರ್ತಿಯನ್ನು ಸ್ಥಳಾಂತರ ಮಾಡಿರುವ ಆರೋಪ ಕೇಳಿಬಂದಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.
ಇದನ್ನೂ ಓದಿ: ಮೌತ್ ಆರ್ಟ್ ಮೂಲಕ ಅರಳಿದ ಸಂವಿಧಾನ ಶಿಲ್ಪಿಯ ಚಿತ್ರ.. ಎಲ್ಲರ ಗಮನ ಸೆಳೆದ ಬೆಣ್ಣೆನಗರಿ ಕಲಾವಿದ
ಆರ್.ಜಿ.ಎಸ್ ರೈಲ್ವೆ ಜಾಗದಲ್ಲಿ ಸ್ಥಳೀಯರು ಗೌರವಾರ್ಥವಾಗಿ ಕಟ್ಟೆಯೊಂದನ್ನು ನಿರ್ಮಾಣ ಮಾಡಿ ಅಲ್ಲಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದರು. ಆದರೆ, ಯಾರೋ ಬಂದು ಏಕಾಏಕಿ ಮೂರ್ತಿಯನ್ನು ತೆರವುಗೊಳಿಸಿ ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ. ಈ ಘಟನೆಗೆ ಕೇಶ್ವಾಪೂರ ಪೊಲೀಸರು ಸಹ ಸಾಥ್ ನೀಡಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಇದೇ ಸ್ಥಳದಲ್ಲೇ ಮೂರ್ತಿ ಸ್ಥಾಪಿಸಬೇಕು ಎಂದು ಒತ್ತಾಯಿಸಲಾಗಿದೆ.