ಧಾರವಾಡ: ಸಚಿವರಾಗಿ ಮೊದಲ ಬಾರಿಗೆ ಧಾರವಾಡಕ್ಕೆ ಆಗಮಿಸುವ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಅವರ ಸ್ವಾಗತಕ್ಕೆ ಹಾಕಿದ ಬ್ಯಾನರ್ನಲ್ಲಿ ಜಿಲ್ಲಾಧ್ಯಕ್ಷ ಅರವಿಂದ ಬೆಲ್ಲದ ಅವರ ಭಾವಚಿತ್ರ ಕಾಣೆಯಾಗಿತ್ತು.
ನೂತನ ಜಿಲ್ಲಾ ಉಸ್ತುವಾರಿ ಸಚಿವ ಮುನೇನಕೊಪ್ಪ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಅಲ್ಲಲ್ಲಿ ಬ್ಯಾನರ್ ಹಾಕಲಾಗಿತ್ತು. ಬ್ಯಾನರ್ನಲ್ಲಿ ಶಾಸಕ ಬೆಲ್ಲದ ಭಾವಚಿತ್ರ ಹಾಕದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಟೋಲ್ ನಾಕಾದಲ್ಲಿ ಹಾಕಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.
ಓದಿ; ಅಸಮಾಧಾನಿತ ಸಚಿವರನ್ನು ಕರೆದು ಮಾತನಾಡುತ್ತೇನೆ: ಸಿಎಂ ಬೊಮ್ಮಾಯಿ
ಇನ್ನೊಂದೆಡೆ ಮುಖ್ಯಮಂತ್ರಿ ರೇಸ್ನಲ್ಲಿದ್ದ ಶಾಸಕ ಅರವಿಂದ ಬೆಲ್ಲದ ಅವರು ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಿದರೂ ಜಿಲ್ಲಾಧ್ಯಕ್ಷ ಬೆಲ್ಲದ ಅವರು ಆಗಮಿಸದಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.