ETV Bharat / state

ವಾಯವ್ಯ ಕರ್ನಾಟಕ ಸಾರಿಗೆ : 1.50 ಕೋಟಿ ದಾಟಿದ ಯುಪಿಐ ವಹಿವಾಟು - NE Karnataka Transport

ವಾಯವ್ಯ ಕರ್ನಾಟಕ ಸಾರಿಗೆ ಬಸ್​ನಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗಿದ್ದು ಯುಪಿಐ ಪಾವತಿ ವ್ಯವಸ್ಥೆಗೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

upi-transaction-crossed-1-dot-50-crore-in-northwest-karnataka-transport
ವಾಯವ್ಯ ಕರ್ನಾಟಕ ಸಾರಿಗೆ : 1.50 ಕೋಟಿ ದಾಟಿದ ಯುಪಿಐ ವಹಿವಾಟು
author img

By ETV Bharat Karnataka Team

Published : Dec 31, 2023, 10:51 PM IST

ಹುಬ್ಬಳ್ಳಿ : ಪ್ರಯಾಣಿಕ ಸ್ನೇಹಿಯಾಗಿರುವ ರಾಜ್ಯ ಸಾರಿಗೆ ಸಂಸ್ಥೆ ಈಗ ಮತ್ತೊಂದು ಹೆಜ್ಜೆ ಮೂಲಕ ಜನರಿಗೆ ಹತ್ತಿರವಾಗಿದೆ. ರಾಜ್ಯದ ಸಾರ್ವಜನಿಕ ರಸ್ತೆ ಸಾರಿಗೆ ವ್ಯವಸ್ಥೆಯಲ್ಲಿಯೇ ಇದೇ ಮೊದಲ ಬಾರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಅಳವಡಿಸಲಾದ ಯುಪಿಐ (Unified Payment interface - UPI) ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದಕ್ಕೆ ಸಾರ್ವಜನಿಕರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಪ್ರಾಯೋಗಿಕವಾಗಿ ಆರಂಭಿಸಲಾದ ಈ ಯುಪಿಐ ವಹಿವಾಟುಗಳ ಮೊತ್ತ ಒಂದೂವರೆ ಕೋಟಿ ರೂಪಾಯಿ ದಾಟಿದೆ. ಈ ತಿಂಗಳಲ್ಲಿ ಸಂಸ್ಥೆಯ ಎಲ್ಲಾ ಬಸ್ಸುಗಳಿಗೂ ಯುಪಿಐ ಪಾವತಿ ವ್ಯವಸ್ಥೆಯನ್ನು ವಿಸ್ತರಿಸಲಾಗುತ್ತದೆ ಎಂದು ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್ ತಿಳಿಸಿದ್ದಾರೆ.

ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ಬಸ್ಸುಗಳಲ್ಲಿ ಟಿಕೆಟ್ ಪಡೆಯಲು ಯುಪಿಐ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಕಳೆದ ಸೆಪ್ಟೆಂಬರ್ 1ರಂದು ಹುಬ್ಬಳ್ಳಿ ಗ್ರಾಮಾಂತರದ 3ನೇ ಘಟಕದ ಬಸ್ಸುಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿತ್ತು. ಈ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಿರ್ವಾಹಕರಿಗೆ ಪ್ರತ್ಯೇಕ ಸ್ಟ್ಯಾಟಿಕ್ ಕ್ಯೂ ಆರ್ ಕೋಡ್ ನೀಡಲಾಗಿತ್ತು. ಈ ಮೂಲಕ ಪ್ರಯಾಣಿಕರು ಫೋನ್ ಪೇ, ಗೂಗಲ್ ಪೇ ಮತ್ತಿತರ ಯಾವುದೇ ಯುಪಿಐ ಅಪ್ಲಿಕೇಷನ್ ಮುಖಾಂತರ ಟಿಕೆಟ್​ ಹಣ ಪಾವತಿಸಲು ಅವಕಾಶ ಕಲ್ಪಿಸಲಾಗಿತ್ತು.

ಪದೆ ಪದೇ ಪ್ರಯಾಣಿಕರು ಹಾಗೂ ನಿರ್ವಾಹಕರ ನಡುವೆ ಸಂಘರ್ಷಕ್ಕೆ ಕಾರಣವಾಗುವ ಚಿಲ್ಲರೆ ಸಮಸ್ಯೆ ಪರಿಹಾರ, ನಗದು ರಹಿತ ಪ್ರಯಾಣ ಹಾಗೂ ಸಮಯದ ಉಳಿತಾಯ ಮುಂತಾದ ಪ್ರಯೋಜನಗಳಿಂದಾಗಿ ಯುಪಿಐ ವ್ಯವಸ್ಥೆಗೆ ಸಾರ್ವಜನಿಕರಿಂದ ಹಾಗೂ ಸಿಬ್ಬಂದಿಗಳಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ. ಪ್ರಸ್ತುತ ಈ ಯುಪಿಐ ವ್ಯವಸ್ಥೆಯನ್ನು ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಎಲ್ಲಾ 452 ಬಸ್ಸುಗಳಿಗೆ ವಿಸ್ತರಿಸಲಾಗಿದೆ. ಇಲ್ಲಿಯವರೆಗೆ 71,396 ವಹಿವಾಟುಗಳು ನಡೆದಿದ್ದು, ರೂ. 1,50,26,815 ಮೊತ್ತ ಪಾವತಿಯಾಗಿರುತ್ತದೆ.

ಹಲವು ಅನುಕೂಲತೆಗಳಿರುವುದರಿಂದ ಸಾರ್ವಜನಿಕರು ಹಾಗೂ ಸಿಬ್ಬಂದಿಗಳ ಬೇಡಿಕೆಯಂತೆ ಯುಪಿಐ ಪಾವತಿ ವ್ಯವಸ್ಥೆಯನ್ನು ಇತರೆ ಬಸ್ಸುಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಸಂಬಂಧಿತ ಪ್ರಕ್ರಿಯೆಗಳು ಪ್ರಗತಿಯಲ್ಲಿದ್ದು, ಜನವರಿ ತಿಂಗಳ ಅಂತ್ಯದೊಳಗೆ ಸಂಸ್ಥೆಯ ಎಲ್ಲಾ 4,581 ಬಸ್​ಗಳಲ್ಲಿ ಈ ವ್ಯವಸ್ಥೆ ಲಭ್ಯವಾಗಲಿದೆ. ಇದರ ಜೊತೆಗೆ ಬಸ್ಸುಗಳಲ್ಲಿ ಈಗಿರುವ ನಗದು ಪಾವತಿ ವ್ಯವಸ್ಥೆಯೂ ಮುಂದುವರೆಯುತ್ತದೆ ಎಂದು ಭರತ್ ಮಾಹಿತಿ ನೀಡಿದರು.

ಇದನ್ನೂ ಓದಿ : ರಜತ ಮಹೋತ್ಸವದ ಭರ್ಜರಿ ಕೊಡುಗೆ : ನೌಕರರ ವಿರುದ್ಧದ ಶಿಸ್ತುಕ್ರಮ ಇತ್ಯರ್ಥಪಡಿಸಿದ ಬಿಎಂಟಿಸಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.