ETV Bharat / state

ಧಾರವಾಡ ಜಿಲ್ಲೆಯಲ್ಲಿ ತೆರವಾದ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆ - undefined

ಚುನಾವಣೆಯ ವೇಳಾಪಟ್ಟಿಯನ್ನು ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಕಟಿಸಿದ್ದು, ಮೇ 13 ರಂದು ಅಧಿಸೂಚನೆ ಪ್ರಕಟವಾಗಲಿದೆ. ಮೇ 16ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಸಾಂದರ್ಭಿಕ ಚಿತ್ರ
author img

By

Published : May 12, 2019, 3:58 AM IST

ಧಾರವಾಡ: ವಿವಿಧ ಕಾರಣಗಳಿಂದ ತೆರವಾಗಿರುವ ಕುಂದಗೋಳ ತಾಲೂಕಿನ ಕಳಸ, ಸಂಶಿ, ಚಾಕಲಬ್ಬಿ, ಮತ್ತಿಗಟ್ಟಿ, ನವಲಗುಂದ ತಾಲೂಕಿನ ಶಿರೂರ, ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಹಾಗೂ ಧಾರವಾಡ ತಾಲೂಕಿನ ಕಡಬಗಟ್ಟಿ ಗ್ರಾಮ ಪಂಚಾಯಿತಿಯ ಸ್ಥಾನಗಳಿಗೆ ಮೇ 29 ರಂದು ಮತದಾನ ನಡೆಯಲಿದೆ.

ಚುನಾವಣೆಯ ವೇಳಾಪಟ್ಟಿಯನ್ನು ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಕಟಿಸಿದ್ದು, ಮೇ 13 ರಂದು ಅಧಿಸೂಚನೆ ಪ್ರಕಟವಾಗಲಿದೆ. ಮೇ 16ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಮೇ 17ರಂದು ನಾಮಪತ್ರಗಳ ಪರಿಶೀಲಿನೆ ನಡೆಯಲಿದೆ.

ಮೇ 20ರ ಸೋಮವಾರ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 29ರ ಬುಧವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮೇ 31ರಂದು ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಹೆಚ್ಚಿನ ವಿವರಗಳಿಗೆ ಸಂಬಂಧಿಸಿದ ಚುನಾವಣಾಧಿಕಾರಿ ಹಾಗೂ ತಹಶಿಲ್ದಾರ್​ ಅವರನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ದೀಪಾ ಚೋಳನ್​ ‌ತಿಳಿಸಿದ್ದಾರೆ.

Intro: ಧಾರವಾಡ: ವಿವಿಧ ಕಾರಣಗಳಿಂದಾಗಿ ತೆರವಾಗಿರುವ ಜಿಲ್ಲೆಯ ಕುಂದಗೋಳ ತಾಲೂಕಿನ ಕಳಸ, ಸಂಶಿ, ಚಾಕಲಬ್ಬಿ, ಮತ್ತಿಗಟ್ಟಿ, ನವಲಗುಂದ ತಾಲೂಕಿನ ಶಿರೂರ, ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ,ಧಾರವಾಡ ತಾಲೂಕಿನ ಕಡಬಗಟ್ಟಿ ಗ್ರಾಮ ಪಂಚಾಯತಗಳ ಸದಸ್ಯ ಸ್ಥಾನಗಳಿಗೆ ಮೇ. 29 ರಂದು ಚುನಾವಣೆ ನಡೆಯಲಿದೆ.

ಚುನಾವಣೆಯ ವೇಳಾಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ,ಜಿಲ್ಲಾಧಿಕಾರಿ ದೀಪಾ ಚೋಳನ್ ಪ್ರಕಟಿಸಿದ್ದಾರೆ. ಮೇ.13 ಸೋಮವಾರದಂದು ಅಧಿಸೂಚನೆ ಪ್ರಕಟವಾಗಲಿದೆ. ಮೇ 16,ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.ಮೇ.17 ಶುಕ್ರವಾರ ನಾಮಪತ್ರಗಳನ್ನು ಪರಿಶೀಲಿಸಲಾಗುವುದು.

ಮೇ.20 ಸೋಮವಾರ ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ.29 ಬುಧವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮೇ 31 ಶುಕ್ರವಾರ, ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. Body:ಈ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ, ಸಾರ್ವಜನಿಕರು ಹೆಚ್ಚಿನ ವಿವರಗಳಿಗೆ ಸಂಬಂಧಿಸಿದ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ ‌ತಿಳಿಸಿದ್ದಾರೆ.

( ಜಿಲ್ಲಾಧಿಕಾರಿ ದೀಪಾ ಚೋಳನ ಅವರ ಪೈಲ್ ಶಾಟ್ ಬಳಸಿಕೊಳ್ಳಿ ಸರ್)Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.