ETV Bharat / state

ಜೂನ್​ 26ರಂದು ಬೆಂಗಳೂರು- ಧಾರವಾಡ ವಂದೇ ಭಾರತ್‌ ರೈಲಿಗೆ ಪ್ರಧಾನಿ ಚಾಲನೆ

ಬೆಂಗಳೂರು- ಧಾರವಾಡ ಮಾರ್ಗದಲ್ಲಿ ಸಂಚರಿಸಲಿರುವ ವಂದೇ ಭಾರತ್‌ ರೈಲಿಗೆ ಜೂನ್​ 26ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣ
ಜೂನ್​ 26ರಂದು ಬೆಂಗಳೂರು- ಧಾರವಾಡ ವಂದೇ ಭಾರತ್‌ ರೈಲಿಗೆ ಪ್ರಧಾನಿ ಚಾಲನೆ
author img

By

Published : Jun 18, 2023, 9:25 PM IST

ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದ ಜನರ ಬಹುನಿರೀಕ್ಷಿತ ವಂದೇ ಭಾರತ್ ರೈಲು ಸಂಚಾರದ ಬಗ್ಗೆ ನೈಋತ್ಯ ರೈಲ್ವೆ ವಲಯದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಪ್ರತಿಷ್ಠಿತ ವಂದೇ ಭಾರತ್‌ ರೈಲು ಗುರುವಾರ ಬೆಂಗಳೂರು ರೈಲು ನಿಲ್ದಾಣಕ್ಕೆ ಆಗಮಿಸಿದ್ದು, ಬೆಂಗಳೂರು- ಧಾರವಾಡ ಮಾರ್ಗದಲ್ಲಿ ಸಂಚರಿಸಲು ಜೂನ್​​ 26ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ.

ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಚಾಲನೆ ನೀಡುವ ಮುನ್ನ ಸೋಮವಾರದಿಂದ ಪ್ರಾಯೋಗಿಕ ಚಾಲನೆ ನಡೆಯಲಿದೆ. ಎಂಟು ಬೋಗಿಗಳುಳ್ಳ ಮಿನಿ ವಂದೇ ಭಾರತ್‌ ಇದಾಗಿದೆ. ಚೆನ್ನೈನ ಪೆರಂಬೂರಿನಿಂದ ಹೊರಟು ಬೆಂಗಳೂರು ತಲುಪಿದ್ದು, ಸದ್ಯ ಇಲ್ಲಿನ ಕೆಎಸ್‌ಆರ್‌ ನಿಲ್ದಾಣದ 7ನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಲುಗಡೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ನಿಟ್ಟಿನಲ್ಲಿ ಧಾರವಾಡ-ಬೆಂಗಳೂರು ಮಧ್ಯ ಸಂಚರಿಸುವ ರೈಲು ಮಧ್ಯಾಹ್ನ 12-10ಕ್ಕೆ ಹುಬ್ಬಳ್ಳಿಗೆ ಆಗಮಿಸಿ 12-15ಕ್ಕೆ ಧಾರವಾಡಕ್ಕೆ ಪ್ರಯಾಣ ಬೆಳೆಸಲಿದೆ.

ಇದನ್ನೂ ಓದಿ: Guarantee scheme: ಬಿಜೆಪಿ ಸರ್ಕಾರದ ಬೆಲೆ ಏರಿಕೆ ಹೊಡೆತಕ್ಕೆ ತತ್ತರಿಸಿದವರಿಗಾಗಿ ಗ್ಯಾರಂಟಿ ತರಬೇಕಾಯಿತು : ಸಚಿವ ದಿನೇಶ್ ಗುಂಡೂರಾವ್

ವಾರದ ಆರು ದಿನಗಳ ಕಾಲ ಪ್ರಯಾಣಿಕರಿಗೆ ಸೇವೆ: ಈ ವಂದೇ ಭಾರತ್‌ ರೈಲು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಹುಬ್ಬಳ್ಳಿಯ ಶ್ರೀಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದ ಮೂಲಕ ಧಾರವಾಡ ರೈಲು ನಿಲ್ದಾಣದವರೆಗೆ ಅಂದರೆ 487.47 ಕಿಲೋ ಮೀಟರ್​ ದೂರ ಸಂಚರಿಸಲಿದೆ. ಮಂಗಳವಾರ ಹೊರತುಪಡಿಸಿ ವಾರದ ಆರು ದಿನಗಳ ಕಾಲ ಪ್ರಯಾಣಿಕರಿಗೆ ಸೇವೆ ಒದಗಿಸಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಎಫೆಕ್ಟ್: ಧಾರ್ಮಿಕ ಕ್ಷೇತ್ರಗಳಿಗೆ ಹರಿದು ಬರುತ್ತಿರುವ ಮಹಿಳಾ ಭಕ್ತರು.. ಆಯತಪ್ಪಿ ಬಸ್​ನಿಂದ ಬಿದ್ದ ಬಾಲಕಿ

ರಾತ್ರಿ 8:10ಕ್ಕೆ ಬೆಂಗಳೂರು ನಗರ ತಲುಪುವ ನಿರೀಕ್ಷೆ: ಬೆಂಗಳೂರಿಂದ 6 ಗಂಟೆ 55 ನಿಮಿಷಗಳ ಅಂತರದಲ್ಲಿ ಇದು ಧಾರವಾಡ ತಲುಪಲಿದೆ ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರು ನಗರದಿಂದ ಬೆಳಗ್ಗೆ 5.45ಕ್ಕೆ ಹೊರಟು ಮಧ್ಯಾಹ್ನ 12.40ಕ್ಕೆ ಧಾರವಾಡ ತಲುಪಲಿದೆ. ಧಾರವಾಡದಿಂದ ಮಧ್ಯಾಹ್ನ 1.15ಕ್ಕೆ ಹೊರಟು ರಾತ್ರಿ 8:10ಕ್ಕೆ ಬೆಂಗಳೂರು ನಗರವನ್ನು ತಲುಪುವ ನಿರೀಕ್ಷೆಯಿದೆ.

ಇದನ್ನೂ ಓದಿ: Parcel on wheels: ಅಂಚೆ ಇಲಾಖೆಯ ಪಾರ್ಸೆಲ್‌ ಆನ್‌ ವ್ಹೀಲ್ಸ್‌ ಯೋಜನೆಗೆ ಭರ್ಜರಿ ಸ್ಪಂದನೆ: ಇತರೆಡೆಗೂ ವಿಸ್ತರಿಸಲು ಮುಂದಾದ ಇಲಾಖೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.