ಹುಬ್ಬಳ್ಳಿ: ಕೇಂದ್ರ ಸರ್ಕಾರದ ಭೂ ಸುಧಾರಣಾ ಮಸೂದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ್ಗೆ ಕರೆ ನೀಡಿದ್ದು, ಇದಕ್ಕೆ ಕಳಸಾ ಬಂಡೂರಿ ಹೋರಾಟ ಸಮಿತಿ, ಸಿಐಟಿಯು, ಜೆಡಿಎಸ್ ಪಕ್ಷ ಹಾಗೂ ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಸಮಿತಿ ಬೆಂಬಲ ಸೂಚಿಸಿವೆ ಎಂದು ರೈತ ಮುಖಂಡ ಸಿದ್ದಣ್ಣ ತೇಜಿ ತಿಳಿಸಿದ್ದಾರೆ.
ನಗರದ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾಳ ಕೃಷಿ ಕಾನೂನು ತಿದ್ದುಪಡಿ ವಿರೋಧಿಸಿ ನಾಳೆ ರೈತ ಸಂಘಟನೆಗಳು ಕರೆ ನೀಡಿರುವ “ಭಾರತ ಬಂದ್”ಗೆ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇವೆ ಎಂದರು.
ಓದಿ: 12 ಲಕ್ಷ ಡೋಸ್ ಲಸಿಕೆ ಕೇಂದ್ರದಿಂದ ರಾಜ್ಯಕ್ಕೆ ಶೀಘ್ರ ರವಾನೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ನಾಳೆ ಬೆಳಗ್ಗೆ 10 ಗಂಟೆಗೆ ಚೆನ್ನಮ್ಮ ವೃತ್ತದಲ್ಲಿ ನಡೆಯುವ ರೈತರ ಹೋರಾಟದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಪಕ್ಷದ ಸಮಸ್ತ ಅಭಿಮಾನಿಗಳು ಭಾಗವಹಿಸಿ ಬೆಂಬಲ ಸೂಚಿಸಲಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್ ಯಶ್ವಸಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.