ಹುಬ್ಬಳ್ಳಿ: ಉತ್ತರಪ್ರದೇಶದ ಹಥ್ರಾಸ್ನಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಿದರು.
ತಹಶೀಲ್ದಾರ ಚೇರಿ ಎದುರು ಪ್ರತಿಭಟನೆ ಮಾಡಿದ ಕಾರ್ಯಕರ್ತರು, ಉತ್ತರಪ್ರದೇಶ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಬಂದ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಅಲ್ಲದೆ ಅತ್ಯಾಚಾರಿಗಳನ್ನು ಮಟ್ಟ ಹಾಕುವಲ್ಲಿ ಯೋಗಿ ಅದಿತ್ಯನಾಥ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ಯುಪಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ. ಕೂಡಲೇ ಉತ್ತರಪ್ರದೇಶ ರಾಜ್ಯ ಸರ್ಕಾರವನ್ನು ವಿಸರ್ಜಿಸಿ ರಾಷ್ಟ್ರಪತಿ ಆಳ್ವಿಕೆ ತರಬೇಕು ಎಂದು ಆಗ್ರಹಿಸಿದರು.