ಹುಬ್ಬಳ್ಳಿ: ನಗರದಲ್ಲಿ ನಡೆಯಲಿರುವ ದೇಶಪಾಂಡೆ ಫೌಂಡೇಶನ್ ಕೌಶಲ್ಯ ಅಭಿವೃದ್ಧಿ ಕೇಂದ್ರ ಹಾಗೂ ಹೆಚ್ಡಿಬಿಆರ್ಟಿಎಸ್ ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ನಗರಕ್ಕೆ ಆಗಮಿಸಿದ್ದಾರೆ.
![Vice President Venkaiah Naidu](https://etvbharatimages.akamaized.net/etvbharat/prod-images/kn-hbl-09-venkai-naidu-hubli-av-7208089_01022020192751_0102f_1580565471_992.jpg)
ನಾಳೆ ಹುಬ್ಬಳ್ಳಿ ನಗರದಲ್ಲಿ ನಡೆಯಲಿರುವ ದೇಶಪಾಂಡೆ ಫೌಂಡೇಶನ್ ಕೌಶಲ್ಯ ಅಭಿವೃದ್ಧಿ ಕೇಂದ್ರ ಹಾಗೂ ಹೆಚ್ಡಿಬಿಆರ್ಟಿಎಸ್ ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ವೆಂಕಯ್ಯ ನಾಯ್ಡು ಅವರನ್ನು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ವ್ಯವಹಾರ ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ್ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಬೆಳಗಾವಿಯ ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್ ಸ್ವಾಗತಿಸಿದರು.