ಹುಬ್ಬಳ್ಳಿ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನದ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೈವಾಡವಿದೆ ಎಂದು ವಿನಯ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಆರೋಪಿಸಿದರು.
ಈ ಪ್ರಕರಣದಲ್ಲಿ ರಾಜಕೀಯ ಕೈವಾಡವಿದೆ. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪಾತ್ರವಿದೆ. ನಮ್ಮನ್ನ ರಾಜಕೀಯವಾಗಿ ಮುಗಿಸುವುದಕ್ಕೆ ಈ ರೀತಿ ಕುತಂತ್ರ ಮಾಡುತ್ತಿದ್ದಾರೆ. ಕಾನೂನು ರೀತಿಯಾಗಿ ನಾವು ಹೋರಾಟ ಮಾಡಲಿದ್ದೇವೆ ಎಂದರು.
ಏನೇ ಬಂದರೂ ನಾವು ಎದುರಿಸಲು ಸಿದ್ಧರಿದ್ದೇವೆ. ರಾಜಕೀಯವಾಗಿ ನಮ್ಮನ್ನ ಮುಕ್ತಾಯಗೊಳಿಸಲು ಈ ಪ್ರಕರಣದಲ್ಲಿ ನಮ್ಮನ್ನ ತಳುಕು ಹಾಕಿದ್ದಾರೆ. ಏನೇ ಕುತಂತ್ರ ಮಾಡಿದರೂ ನಾವು ಕಾನೂನು ರೀತಿ ಹೋರಾಟ ನಡೆಸಲಿದ್ದೇವೆ. ನಾವಿಬ್ಬರೂ ರಾಜಕೀಯವಾಗಿ ಬಲಿಷ್ಠರಾಗಿರುವ ಕಾರಣ ಈ ರೀತಿ ಮಾಡುತ್ತಿದ್ದಾರೆ. ಲಿಂಗಾಯತ ಮುಖಂಡರು ಬೆಳೆಯಬಾರದೆಂದು ಪ್ರಹ್ಲಾದ್ ಜೋಶಿ ಈ ರೀತಿಯ ಕುತಂತ್ರ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.