ಹುಬ್ಬಳ್ಳಿ : ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಹೋಗುತ್ತಿದೆ. ಆದರೆ, ಜನ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಎಷ್ಟೇ ಜಾಗೃತಿ ಮೂಡಿಸಿದರೂ, ಜನ ಮಾತ್ರ ಕ್ಯಾರೆ ಅನ್ನುತ್ತಿಲ್ಲ.
ಇದಕ್ಕೆ ಸ್ಪಷ್ಟ ಉದಾಹರಣೆ ಎಂದರೆ ನಗರದಲ್ಲಿ ಸಂಚರಿಸುವ ಬಸ್ಗಳು. ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಮಿತಿಗಿಂತ ಹೆಚ್ಚಿನ ಜನರನ್ನು ತುಂಬಲಾಗುತ್ತಿದ್ದು, ಜನ ಜಾಸ್ತಿಯಾಗಿ ಕೆಲವರು ಬಾಗಿಲಲ್ಲೇ ನೇತಾಡಿಕೊಂಡು ಹೋಗುತ್ತಿದ್ದಾರೆ. ನಗರದ ಬಸ್ಗಳಲ್ಲಿ ಸಾಮಾಜಿಕ ಅಂತರದ ನಿಯಮ ಗಾಳಿಗೆ ತೂರಿ ಜನ ತುಂಬಿಸುವುದು ನೋಡಿದ್ರೆ, ದೇಶ ಕೊರೊನಾ ಮುಕ್ತವಾಯ್ತಾ ಎಂದು ಅನ್ನಿಸದಿರಲ್ಲ.
ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಒಂದು ಬಸ್ನಲ್ಲಿ 30 ಜನರು ಮಾತ್ರ ಸಂಚರಿಸಬೇಕು ಎಂಬ ನಿಯಮವಿದೆ. ಆದರೆ, ಜನ ಮಾತ್ರ ಹಿಂದಿನಂತೆ ಬೇಕಾ ಬಿಟ್ಟಿ ಪ್ರಯಾಣಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸದಿದ್ದರೆ. ಸಾರಿಗೆ ಬಸ್ಗಳೇ ಕೊರೊನಾ ಹಾಟ್ ಸ್ಪಾಟ್ ಆದ್ರೂ ಅಚ್ಚರಿಯಿಲ್ಲ.