ಹುಬ್ಬಳ್ಳಿ: ಮತದಾರರ ಪಟ್ಟಿ ಮತ್ತು ಮೀಸಲಾತಿ ಅದಲು ಬದಲಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ಕಟ್ನೂರು ಗ್ರಾಮದಲ್ಲಿ ನಡೆದಿದೆ.
ಕಟ್ನೂರು ಗ್ರಾ. ಪಂ. ಚುನಾವಣಾ ಮತದಾರರ ಪಟ್ಟಿ ಮತ್ತು ಮೀಸಲಾತಿ ಅದಲು ಬದಲಾಗಿದೆ. 1ನೇ ವಾರ್ಡಿಗೆ ಬರಬೇಕಿದ್ದ ಮೀಸಲಾತಿ 2ನೇ ವಾರ್ಡಗೆ ಅದಲು ಬದಲಾಗಿದೆ. ಈ ಹಿನ್ನೆಲೆ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿ ಮತದಾನ ಮಾಡದಿರಲು ನಿರ್ಧರಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ, ನಗರ ತಹಶೀಲ್ದಾರ್ ಶಶಿಧರ ಮಾಡ್ಯಾಳ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಲಾಗುತ್ತಿದೆ. ಹೀಗಾಗಿ ಮತದಾನ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ ಎಂದರು.