ಹುಬ್ಬಳ್ಳಿ: ಮಾಜಿ ಡಿಸಿಎಂ ಜಿ. ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಡಿಸಿಎಂ ಜಿ. ಪರಮೇಶ್ವರ್ ಪಿಎ ಆತ್ಮಹತ್ಯೆ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದೆ. ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ರಮೇಶ್ ಫೋನ್ ಕರೆಗಳು, ಮರಣೋತ್ತರ ಪರೀಕ್ಷೆಯ ವರದಿ ಆಧರಿಸಿ ತನಿಖೆ ಆಗುತ್ತಿದೆ. ಅವರ ಸಾವಿನ ಬಗ್ಗೆ ಸ್ವತಃ ಜಿ. ಪರಮೇಶ್ವರ್ ಈಗಾಗಲೇ ಹೇಳಿಕೆ ನೀಡಿದ್ದು, ಪ್ರಕರಣವನ್ನು ಯಾರೂ ರಾಜಕೀಕರಣ ಮಾಡಿಲ್ಲ. ಇದರಲ್ಲಿ ಯಾವುದೇ ರಾಜಕೀಯ ಇಲ್ಲವೆಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.