ಹುಬ್ಬಳ್ಳಿ: ರೈಲ್ವೆ ನಿಲ್ದಾಣದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಭದ್ರತಾ ಆಯುಕ್ತರ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ರೈಲ್ವೆ ಜಿಎಂ ಎ.ಕೆ.ಸಿಂಗ್ ಹೇಳಿದರು.
ಹುಬ್ಬಳ್ಳಿ ಬಾಂಬ್ ಸ್ಫೋಟದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ವಿಡಿಯೋ ನೋಡಿ
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಫೋಟಗೊಂಡ ಸ್ಥಳಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಕ್ಕೆ ಸಂಬಂಧಿಸಿದಂತೆ ಆರ್‌ಪಿಎಫ್ ಸಿಬ್ಬಂದಿಯ ನಿರ್ಲಕ್ಷ್ಯ ಒಪ್ಪಿಕೊಂಡ ಅವರು, ಎಫ್ ಎಸ್ ಎಲ್ ವರದಿ ಬಂದ ಮೇಲೆ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದಿದ್ದಾರೆ.
ಹುಬ್ಬಳ್ಳಿ ಸ್ಫೋಟ ಪ್ರಕರಣ: ಬಾಂಬ್ ನಿಷ್ಕ್ರಿಯ ದಳದಿಂದ ಕಾರ್ಯಾಚರಣೆ
ವಿಮಾನ ನಿಲ್ದಾಣಕ್ಕೆ ಒದಗಿಸಿದ ಭದ್ರತೆಯಂತೆ ರೈಲ್ವೆ ನಿಲ್ದಾಣದಲ್ಲಿ ಒದಗಿಸಲು ಸಾಧ್ಯವಿಲ್ಲ. ದುಷ್ಕರ್ಮಿಗಳು ಹಳ್ಳಿಗಳ ಮೇಲಿಂದಲೂ ಬರುವ ಸಾಧ್ಯತೆಗಳಿರುತ್ತವೆ. ಈ ನಿಟ್ಟಿನಲ್ಲಿ ನಿಲ್ದಾಣಕ್ಕೆ ಬರುವ ಪ್ರತಿಯೊಬ್ಬರನ್ನು ತಪಾಸಣೆ ನಡೆಸಲಾಗುವುದು. ಅಲ್ಲದೇ ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನಿಸಲಾಗಿದ್ದು, ರೈಲ್ವೆ ನಿಲ್ದಾಣಕ್ಕೆ ಅಗತ್ಯ ಭದ್ರತೆ ಒದಗಿಸಲಾಗುವುದು ಎಂದರು.