ಹುಬ್ಬಳ್ಳಿ: ಮಹದಾಯಿ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿನವರಿಗೆ ಯಾವುದೇ ನೈತಿಕತೆ ಇಲ್ಲಾ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಸಿಎಂ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಕುಡಿಯುವ ನೀರಿಗಾಗಿ ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್‌ಗೆ ಪರಿಪರಿಯಾಗಿ ಬೇಡಿಕೊಂಡೆವು. ಯೋಜನೆ ಜಾರಿಗೆ ಕೊನೆಯ ಹಂತದ ತೀರ್ಮಾನ ತೆಗೆದುಕೊಳ್ಳಲು ಸಜ್ಜಾಗಿದ್ದೇವೆ. ಒಗ್ಗರಣೆ ಹಾಕಿ ಅಡುಗೆ ಮಾಡುವವರು ನಾವೇ, ಕೊನೆಯಲ್ಲಿ ನಾವು ಮಾಡಿದ್ದು ಅನ್ನುವುದು ಕಾಂಗ್ರೆಸ್ ಅಭ್ಯಾಸ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಪಾದಯಾತ್ರೆ: ಕೋವಿಡ್ ಹೆಸರಲ್ಲಿ ಕಾಂಗ್ರೆಸ್ ಪಾದಯಾತ್ರೆಯನ್ನು ಬಿಜೆಪಿ ತಡೆಯುತ್ತಿದೆ ಎಂದು ಆರೋಪ ಮಾಡಲಾಗುತ್ತಿದೆ. ಯಾತ್ರೆ ಯಶಸ್ವಿಯಾಗಿ ನಡೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಯಾಕೆ ಅಂದರೆ ಪಾದಯಾತ್ರೆ ನಡೆದಲ್ಲೆಲ್ಲಾ ಕಾಂಗ್ರೆಸ್ ಸೋಲುತ್ತದೆ. ಹೀಗಾಗಿ ಕೋವಿಡ್ ಕಾಂಗ್ರೆಸ್‌ಗೆ ವರವಾಗಿ ಪರಿಣಮಿಸುತ್ತಿದೆ ಎಂದು ಜೋಶಿ ತಿಳಿಸಿದರು.
ಮತ್ತೆ ಬಿಜೆಪಿಗೆ ಬಹುಮತ: ಬೊಮ್ಮಾಯಿ ನೇತೃತ್ವದಲ್ಲಿ ಜನಪರ ಆಡಳಿತ ಕೊಡುತ್ತಿದ್ದೇವೆ. ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸಿ ಥಂಬಿಂಗ್ ಮೇಜಾರಿಟಿಯಲ್ಲಿ ಮತ್ತೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂಓದಿ:ಸೋಮವಾರ ಸಂಜೆ ನಾನು ದೆಹಲಿಗೆ ಹೋಗ್ತಿರೋದು ನಿಜ: ಸಿಎಂ ಬೊಮ್ಮಾಯಿ