ಹುಬ್ಬಳ್ಳಿ: ಎರಡು ಮಕ್ಕಳ ತಾಯಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಘಂಟಿಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚೋಳನವರ ಓಣಿಯ ನಿವಾಸಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಬಲರಾಮ ಚಂದಾವರಿ ಎಂಬಾತನ ಪತ್ನಿ ಪೂಜಾ (25) ಮೃತ ದುರ್ದೈವಿ. ಇಬ್ಬರ ಮಕ್ಕಳ ತಾಯಿಯಾಗಿ ಮಕ್ಕಳನ್ನು ಚೆನ್ನಾಗಿ ನೋಡಿಕೊಂಡಿದ್ದರಂತೆ. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ನಗರದ ಕಿಮ್ಸ್ ಶವಾಗಾರದ ಮುಂದೆ ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಮಗಳ ಸಾವಿಗೆ ನ್ಯಾಯ ಸಿಗಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ. ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.