ಹುಬ್ಬಳ್ಳಿ: ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಸೀರೆಗೆ ಬೆಂಕಿ ಹೊತ್ತಿಕೊಂಡು ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.
ಆದರ್ಶನಗರ ನಿವಾಸಿ ಛಾಯಾ ನಾಗರಾಜ ಚಂದ್ರಶೇಖರಮಠ (49) ಮೃತಪಟ್ಟ ಮಹಿಳೆ. ಕಿಮ್ಸ್ಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇಲ್ಲಿನ ಅಧ್ಯಾಪಕ ನಗರದ ವಿಶ್ವನಾಥ ಕಲ್ಯಾಣ ಮಂಟಪದ ವಿಶ್ವನಾಥ ಮಂದಿರದಲ್ಲಿ ಜೂ. 21ರಂದು ಪೂಜೆ ಮಾಡುವಾಗ ಸೀರೆಗೆ ಬೆಂಕಿ ಹೊತ್ತಿಕೊಂಡು ಗಾಯಗೊಂಡಿದ್ದರು. ಈ ಸಂಬಂದ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.