ಹುಬ್ಬಳ್ಳಿ: ರಸ್ತೆ ದಾಟುತಿದ್ದಾಗ ಟಿಪ್ಪರ್ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹಳೇ ಹುಬ್ಬಳ್ಳಿಯ ಆನಂದನಗರದಲ್ಲಿನ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಕಿರಾಣಿ ಅಂಗಡಿಗೆ ಹೋಗುವಾಗ ಮಹಿಳೆಯು ಆನಂದನಗರದ ಹತ್ತಿರದ ಪೆಟ್ರೋಲ್ ಬಂಕ್ ಬಳಿ ರಸ್ತೆ ದಾಟುತಿದ್ದ ವೇಳೆ ಏಕಾಏಕಿ ಬಂದ ಟಿಪ್ಪರ್ ಮಹಿಳೆ ಮೇಲೆ ಹರಿದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಮೃತ ಮಹಿಳೆಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಟಿಪ್ಪರ್ ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.