ETV Bharat / state

ಕೇಂದ್ರ ಸಚಿವ ಜೋಶಿ ಮನೆಯೆದುರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಾವು

ಮನೆ ಕುಸಿತಕ್ಕೆ ಪರಿಹಾರ ಸಿಗದೇ ನೊಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

woman who try to commits suicide near prahlad joshi's house dies
ಮಹಿಳೆ ಸಾವು
author img

By

Published : Apr 9, 2021, 1:07 PM IST

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಯ ಮುಂದೆ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.

ಸಾವಿಗೀಡಾದ ಮಹಿಳೆಯ ಸಂಬಂಧಿಕರ ಆಕ್ರಂದನ

ಶ್ರೀದೇವಿ ಕಮ್ಮಾರ ಮೃತ ದುರ್ದೈವಿ. ಮನೆ ಬಿದ್ದ ಪರಿಹಾರಕ್ಕೆ ಅಲೆದಾಡಿದ ಮಹಿಳೆ ಕೊನೆಗೆ ಮನನೊಂದು ಸಚಿವರ ಹುಬ್ಬಳ್ಳಿ ಮಯೂರಿ ಎಸ್ಟೇಟ್‌ನಲ್ಲಿರುವ ಮನೆಯ ಎದುರು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಘಟನೆ ಏಪ್ರಿಲ್ 06ರಂದು ನಡೆದಿತ್ತು.

ಬಳಿಕ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಅಮೃತ ದೇಸಾಯಿ ಕೂಡ 50 ಸಾವಿರ ಪರಿಹಾರ ನೀಡಿರುವುದಾಗಿ ಹೇಳಿದ್ದರು.

woman who try to commits suicide near prahlad joshi's house dies
ಡೆತ್​ನೋಟ್​

ಇದನ್ನೂ ಓದಿ:ನನ್ನ ಮನೆ ಎದುರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ಚಿಕಿತ್ಸೆ ಕೊಡಿಸಲು ಹೇಳಿದ್ದೇನೆ: ಪ್ರಹ್ಲಾದ್ ಜೋಶಿ

ಮೃತ ಮಹಿಳೆಗೆ ಇಬ್ಬರು ಮಕ್ಕಳಿದ್ದಾರೆ. ಕಳೆದೆರಡು ದಿನಗಳ ಹಿಂದೆಯಷ್ಟೇ ಆಕೆಯ ಗಂಡನಿಗೆ ಪಾರ್ಶ್ವವಾಯು ಆಗಿರುವುದು ಕುಟುಂಬವನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಈ ಕುರಿತು ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.