ಧಾರವಾಡ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಆಟೋ ಪ್ರಚಾರ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಆರ್. ಎಸ್. ಚಿಣ್ಣನ್ನವರ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಕರಪತ್ರ, ಸ್ಟಿಕ್ಕರ್ಗಳನ್ನು ಬಿಡುಗಡೆ ಮಾಡಲಾಯಿತು. ವಾರ್ತಾ ಇಲಾಖೆ ಕಾರ್ಮಿಕ ಇಲಾಖೆ ಹಾಗೂ ರೆಡ್ ಕ್ರಾಸ್ ಸಹಯೋಗದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಗುರುತಿಸಿದ್ದ ಕೊರೊನಾ ಸೈನಿಕರಿಗೆ ಟಿ ಶರ್ಟ್, ಸ್ಯಾನಿಟೈಸರ್ ಹಾಗೂ ಮಾಸ್ಕ್ಗಳನ್ನು ವಿತರಣೆ ಮಾಡಲಾಯಿತು.
ಸಹಾಯಕ ಕಾರ್ಮಿಕ ಆಯುಕ್ತರಾದ ಮೀನಾ ಪಾಟೀಲ, ಜಿಲ್ಲಾ ಆರ್ಸಿಹೆಚ್ ಅಧಿಕಾರಿ, ಡಾ.ಎಸ್.ಎಂ. ಹೊನಕೇರಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ಕಾರ್ಮಿಕ ಅಧಿಕಾರಿಗಳಾದ ಮಾರಿಕಾಂಬಾ ಹುಲಕೋಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.