ಹುಬ್ಬಳ್ಳಿ: ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಟ್ವಿಟರ್ ಮುಖಾಂತರ ಕಚ್ಚಾಟ ನಡೆಸಿ, ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿ ಲೋಕಸಭೆಯಲ್ಲಿ 290 ಕ್ಕೂ ಹೆಚ್ಚು ಸ್ಥಾನ ಗೆದ್ದು, ಮತ್ತೊಮ್ಮೆ ನರೇಂದ್ರ ಮೋದಿಯವರೇ ಪ್ರಧಾನಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ಪಕ್ಷ ಹೆಚ್ಚಿಗೆ ಸ್ಥಾನಗಳನ್ನು ಗೆಲ್ಲಲಿದೆ. ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಮೋದಿ ಪ್ರಧಾನಿ ಆಗುವುದು ಅಷ್ಟೇ ಸತ್ಯ ಎಂದರು. ವಿರೇಂದ್ರ ಪಾಟೀಲ್ ಅವರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಿ ಕಾಂಗ್ರೆಸ್ ವಿಶ್ವಾಸ ದ್ರೋಹ ಮಾಡಿದೆ. ವೀರಶೈವರು ಕಾಂಗ್ರೆಸ್ಗೆ ವೋಟ್ ಹಾಕುವುದಿಲ್ಲ ಎಂದೂ ಅವರು ಇದೇ ವೇಳೆ ಹೇಳಿದರು.