ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ ಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆ ಇಂದು ಕೂಡಾ ಮುಂದುವರೆದಿದೆ.
ಮಾಜಿ ಸಚಿವರ ಆಪ್ತ ಪ್ರಶಾಂತ ಕೇಕರೆ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಶಾಂತ ಕೇಕರೆ ಅವರನ್ನು ತನಿಖಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ನಿನ್ನೆಯಿಂದ ರಾಜಕೀಯಕ್ಕೆ ಸಂಬಂಧಿಸಿದಂತೆ ತನಿಖೆ ಶುರುವಾಗಿದೆ ಎನ್ನಲಾಗಿದೆ. ನಿನ್ನೆ ಕೂಡಾ ವಿವಿಧ ರಾಜಕೀಯ ಮುಖಂಡರನ್ನು ಅಧಿಕಾರಿಗಳು ಪ್ರಶ್ನಿಸಿದ್ದರು. ವಿಚಾರಣೆಗೆ ಹಾಜರಾಗಿದ್ದ ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಇಂದು ಕೂಡಾ ಸಿಬಿಐ ಕರೆಸಿಕೊಂಡಿದೆ.